ಬ್ರೇಕಿಂಗ್ ನ್ಯೂಸ್
22-07-23 07:48 pm Mangalore Correspondent ಕರಾವಳಿ
ಮಂಗಳೂರು, ಜು.22: ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಚಿವರಿಗೆ ಬರೆದ ಪತ್ರದಲ್ಲಿ ಅವರು ಈ ಪ್ರದೇಶದಲ್ಲಿ ಸಂಚರಿಸುವ ರೈಲುಗಳಿಗೆ ಹೊಸ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ.
ಬೆಂಗಳೂರು-ಮಂಗಳೂರು-ಕಣ್ಣೂರು ಎಕ್ಸ್ಪ್ರೆಸ್ ರೈಲಿಗೆ ರಾಣಿ ಅಬ್ಬಕ್ಕ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಸಂಸದರು ಮನವಿ ಮಾಡಿದ್ದಾರೆ.

ತಿರುವನಂತಪುರಂ-ಮುಂಬೈ ಎಲ್ಟಿಟಿ ಎಕ್ಸ್ಪ್ರೆಸ್ಗೆ ನೇತ್ರಾವತಿ ಎಕ್ಸ್ಪ್ರೆಸ್ ಮತ್ತು ಎರ್ನಾಕುಲಂ-ಹಜರತ್ ನಿಜಾಮುದ್ದೀನ್ ರೈಲಿಗೆ ಮಂಗಳಾ ಲಕ್ಷದ್ವೀಪ ಎಕ್ಸ್ಪ್ರೆಸ್ ಎಂದು ಹೆಸರಿಡಿ. ಇದರಿಂದ ಪ್ರಯಾಣಿಕರು ತಮ್ಮ ಪ್ರಾದೇಶಿಕ ಹೆಸರುಗಳಿಂದ ರೈಲುಗಳನ್ನು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಎರಡು ರೈಲುಗಳು ಮೊದಲು ಮಂಗಳೂರಿನಿಂದಲೇ ಆರಂಭವಾಗಿದ್ದವು. ಈ ರೈಲುಗಳಿಗೆ ಸ್ಥಳೀಯ ಹೆಸರಿಟ್ಟರೇ ಪ್ರಯಾಣಿಕರು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಹೇಳಿದ್ದಾರೆ.
ರೈಲುಗಳಿಗೆ ಈ ಪ್ರದೇಶದ ವ್ಯಕ್ತಿಗಳು, ಸ್ಥಳಗಳು ಮತ್ತು ನದಿಗಳ ಹೆಸರನ್ನು ಇಡುವುದರಿಂದ ಕರಾವಳಿ ಜಿಲ್ಲೆಯ ಜನರ ವಿಶ್ವಾಸ ಹೆಚ್ಚುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಿಂದ ಮಂಗಳೂರಿಗೆ ಮೈಸೂರು ಮಾರ್ಗವಾಗಿ ಸಂಚರಿಸುವ (ರೈಲು ಸಂಖ್ಯೆ 16585/586) ರೈಲಿಗೆ ಮಂಗಳಾದೇವಿ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವಂತೆ ಕಟೀಲ್ ಅವರು ಮನವಿ ಮಾಡಿದ್ದಾರೆ.
Dakshina Kannada MP Nalin Kumar Kateel has urged union railway minster to name the popular trains of the city after eminent personalities and places of coastal Karnataka. He has written a letter to union railway minster Ashwini Vaishnav in this regard. Nalin urged the minister to name the train that runs between Bengaluru and Kannur via Mangaluru as Rani Abbakka Express.
02-04-26 02:46 pm
HK News Staffer
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm