ಬ್ರೇಕಿಂಗ್ ನ್ಯೂಸ್
25-07-23 08:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 25: ರಾಜ್ಯ ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಜುಲೈ 25ರಿಂದ 26ರ ವರೆಗೆ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 26ರಂದು ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಸಾರಲಾಗಿದೆ. ಉಳಿದಂತೆ, ಪದವಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ದಕ್ಷಿಣ ಕನ್ನಡಕ್ಕೆ ಹೋಲಿಸಿದಲ್ಲಿ ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಎರಡನೇ ದಿನವೂ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ನದಿಗಳೂ ತುಂಬಿ ಹರಿಯುತ್ತಿವೆ. ಹಲವು ಕಡೆಗಳಲ್ಲಿ ನೆರೆ ಬಂದಿದ್ದು, ನದಿ ದಡದ ನಿವಾಸಿಗಳಿಗೆ ತೊಂದರೆ ಉಂಟಾಗಿದೆ. ಜುಲೈ 25ರ ಮಂಗಳವಾರವೂ ರೆಟ್ ಅಲರ್ಟ್ ನೀಡಲಾಗಿದ್ದರೂ, ದೊಡ್ಡ ಮಟ್ಟದಲ್ಲಿ ಕರಾವಳಿ ಭಾಗದಲ್ಲಿ ಮಳೆ ಆಗಿಲ್ಲ. ಆದರೆ ರಾಜ್ಯ ಹವಾಮಾನ ಇಲಾಖೆ ಮತ್ತೊಂದು ದಿನಕ್ಕೆ ರೆಡ್ ಅಲರ್ಟ್ ವಿಸ್ತರಿಸಿದ್ದು, ದಿನವೊಂದರಲ್ಲಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಬಳಿ ರಸ್ತೆಗೆ ನೀರು ನುಗ್ಗಿ ಮುಳುಗಡೆಯಾಗಿದ್ದರಿಂದ ಪಂಜ ಭಾಗದಿಂದ ಪದವಿ ಪರೀಕ್ಷೆಗೆ ಬರುತ್ತಿದ್ದ ವಿದ್ಯಾರ್ಥಿಗಳು ನೀರಿಗಿಳಿದು ನಡೆದುಕೊಂಡೇ ಬಂದಿದ್ದರು. ಇದರಿಂದಾಗಿ ಮಂಗಳವಾರ ಪದವಿ ಕಾಲೇಜಿಗೂ ರಜೆ ನೀಡಲಾಗಿತ್ತು.
Mangalore Heavy Rains, School and colleges declared second day on July 26th both in Udupi and Mangalore. Holidays declared for schools and PU Colleges only. Degree Colleges have no holiday.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm