ಬ್ರೇಕಿಂಗ್ ನ್ಯೂಸ್
29-07-23 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
Mangalore Police Constable rescues man falling from train at Central railway station, big accident averted. The video of this has gone viral on social media.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm