ಬ್ರೇಕಿಂಗ್ ನ್ಯೂಸ್
12-08-23 07:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವಾಗಲೇ ಇದರ ಲಾಭ ಎತ್ತಲು ಬಿಜೆಪಿ ಮುಂದಾಗಿದೆ. ಸೌಜನ್ಯಾ ಹೋರಾಟಕ್ಕೆ ನಾವಿದ್ದೇವೆ ಎನ್ನುತ್ತಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಪ್ರತಿಭಟನೆಗೆ ಕೈಜೋಡಿಸಿದ್ದಾರೆ.
ಎರಡು ಜಿಲ್ಲೆಯ ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸುದ್ದಿಗೋಷ್ಟಿ ನಡೆಸಿದ್ದು ಸೌಜನ್ಯಾ ಪ್ರಕರಣದ ಮರು ತನಿಖೆ ಒತ್ತಾಯಿಸಿ ಹೋರಾಟಕ್ಕೆ ಇಳಿಯಲಿದ್ದೇವೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಳಿನ್ ಕುಮಾರ್, ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಾ ಪ್ರಕರಣದಲ್ಲಿ ಪೊಲೀಸ್ ತನಿಖೆ ಆಗಿದೆ. ಸಿಐಡಿ ಬಳಿಕ ಸಿಬಿಐ ತನಿಖೆಯೂ ಆಗಿದೆ. ಸಿಬಿಐ ಅಧಿಕಾರಿಗಳು ಬಂಧಿಸಿದ ವ್ಯಕ್ತಿ ಆರೋಪಿ ಅಲ್ಲ ಅಂತ ಕೋರ್ಟ್ ಹೇಳಿದೆ. ಆವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು. ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ.
ಘಟನೆಯ ಬಳಿಕದ ಹೋರಾಟಗಳು, ಕುಟುಂಬದ ಆಗ್ರಹಗಳ ಬಗ್ಗೆ ತನಿಖೆ ಆಗಬೇಕು. ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು. ಬಿಜೆಪಿಯಿಂದ ಪ್ರಕರಣದ ಮರು ತನಿಖೆಗಾಗಿ ಸಿಎಂಗೆ ಒತ್ತಾಯ ಮಾಡಲಿದೆ. ಆಗಸ್ಟ್ 27ರಂದು ಬಿಜೆಪಿ ಈ ನಿಟ್ಟಿನಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಆಬಳಿಕ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಕೊಡಲಿದ್ದೇವೆ.
ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸೇರಲಿದ್ದಾರೆ. ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಲಿದೆ. ಇದರಲ್ಲಿ ಎರಡೂ ಜಿಲ್ಲೆಗಳ ಶಾಸಕರು, ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯ ಮರುದಿನ ಶಾಸಕರ ನಿಯೋಗ ಸಿಎಂ ಭೇಟಿಯಾಗಲಿದೆ.
ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆದರೂ ಆರೋಪಿಗಳು ಯಾರು ಅನ್ನೋದು ಪತ್ತೆಯಾಗಿಲ್ಲ. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ. ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ. ಬೇರೆ ಬೇರೆ ರೀತಿಯ ಹೋರಾಟಗಾರರು ಬೇರೆ ಹೋರಾಟ ಮಾಡಬಹುದು ಎಂದು ನಳಿನ್ ಕುಮಾರ್ ಹೇಳಿದ್ದಾರೆ.

ಪುತ್ತಿಲ, ತಿಮರೋಡಿ ಹೈಲೈಟ್ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ನಾಯಕರು!
ಈಗಾಗಲೇ ಪುತ್ತೂರು, ಸುಳ್ಯದಲ್ಲಿ ಸೌಜನ್ಯಾ ಪರವಾಗಿ ಭಾರೀ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿದೆ. ಇತ್ತೀಚೆಗೆ ಸುಳ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪಾಲ್ಗೊಂಡಿದ್ದಲ್ಲದೆ, ಭಾರೀ ಸಂಖ್ಯೆಯಲ್ಲಿ ಜನರು ಬೆಂಬಲ ನೀಡಿದ್ದರು. ಪುತ್ತೂರಿನಲ್ಲಿ ಆಗಸ್ಟ್ 14ರಂದು ಪುತ್ತಿಲ ಪರಿವಾರದಿಂದ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆದಿದ್ದು ಇವೆರಡೂ ಕಡೆ ಬಿಜೆಪಿ ಕಾರ್ಯಕರ್ತರೇ ಹೆಚ್ಚು ಮುಂಚೂಣಿಯಲ್ಲಿದ್ದಾರೆ. ಅಲ್ಲದೆ, ಅರುಣ್ ಪುತ್ತಿಲ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಜನರ ನಡುವೆ ಐಕಾನ್ ಆಗಿ ಹೊರ ಹೊಮ್ಮಿದ್ದಾರೆ. ಹೀಗಿರುವಾಗ ನಾವು ದೂರ ನಿಂತರೆ, ರಾಜಕೀಯವಾಗಿ ಮೈನಸ್ ಆಗುತ್ತೆ ಎನ್ನುವ ದೃಷ್ಟಿಯಲ್ಲಿ ಬಿಜೆಪಿ ಶಾಸಕರೇ ಮುಂದೆ ನಿಂತು ಪ್ರತಿಭಟನೆಗೆ ಮುಂದಾಗಿದ್ದಾರೆ. ಆಮೂಲಕ ಕಾಂಗ್ರೆಸ್ ಸರಕಾರಕ್ಕೆ ಮರು ತನಿಖೆಗಾಗಿ ಒತ್ತಡ ಮತ್ತು ಕರಾವಳಿಯಲ್ಲಿ ರಾಜಕೀಯ ಮೈಲೇಜ್ ಪಡೆಯಲು ಮುಂದಾಗಿದ್ದಾರೆ.
BJP to hold massive protest at Dharmasthala favouring Sowjanya rape case as Mahesh Thimarodi comes to limelight.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm