ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm