Mangalore Adyar Accident: ಸ್ಕೂಟರಿಗೆ ಟಿಪ್ಪರ್ ಡಿಕ್ಕಿ ; ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು 

27-08-23 12:42 pm       Mangalore Correspondent   ಕರಾವಳಿ

ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನಪ್ಪಿದ ಘಟನೆ ನಗರ ಹೊರವಲಯದ ಅಡ್ಯಾರ್ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರು, ಆಗಸ್ಟ್ 27: ಟಿಪ್ಪರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವನಪ್ಪಿದ ಘಟನೆ ನಗರ ಹೊರವಲಯದ ಅಡ್ಯಾರ್ ಹೆದ್ದಾರಿಯಲ್ಲಿ ನಡೆದಿದೆ.

ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಮೃತ ವಿದ್ಯಾರ್ಥಿ. ನಗರದ ಮಿಲಾಗ್ರಿಸ್ ಶಾಲೆಯಲ್ಲಿ ಈತ ಹತ್ತನೇ ತರಗತಿಯಲ್ಲಿ ಓದುತ್ತಿದ್ದ. ಗೆಳೆಯನೊಂದಿಗೆ ಆಕ್ಟಿವಾ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ, ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಯ ಭಾಗಕ್ಕೆ ತೀವ್ರ ರಕ್ತಸ್ರಾವವುಂಟಾಗಿತ್ತು. ಕೂಡಲೇ ಸ್ಥಳೀಯರು ಶರಫುದ್ದೀನ್ ನನ್ನು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Mangalore Truck rams scooter at Adyar in Mangalore, SSLC student dies in spot. The deceased has been identified as Sharauddin (16).