Sowjnaya rape case, Vokkaligas, Mangalore: ಸೆ.11-13 ; ಸೌಜನ್ಯಾ ಪ್ರಕರಣ ಮರು ತನಿಖೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ ಒಕ್ಕಲಿಗರ ಧರಣಿ ಸತ್ಯಾಗ್ರಹ

29-08-23 10:50 pm       Mangalore Correspondent   ಕರಾವಳಿ

ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಮಂಗಳೂರು, ಆಗಸ್ಟ್ 29: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ನೈಜ ಆರೋಪಿ ಸಿಕ್ಕಿಲ್ಲವೆಂದು ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಜನರ ಹಕ್ಕೊತ್ತಾಯ ಪರಿಗಣಿಸಿ ರಾಜ್ಯ ಸರಕಾರವೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣವನ್ನು ತನಿಖೆಗೆ ಆದೇಶ ಮಾಡಬೇಕು. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಸರಕಾರದ ಗಮನ ಸೆಳೆಯುತ್ತೇವೆ. ಆಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇವೆ ಎಂದು ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.  

ಸೆ.11ರಂದು ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕಿನವರು ಪಾಲ್ಗೊಳ್ಳಲಿದ್ದಾರೆ. 12ರಂದು ವಿಟ್ಲ ಮತ್ತು ಪುತ್ತೂರು ತಾಲೂಕಿನವರು ಹಾಗೂ 13ರಂದು ಸುಳ್ಯ ಮತ್ತು ಕಡಬ ತಾಲೂಕಿನ ಒಕ್ಕಲಿಗ ಸಂಘದ ಪ್ರತಿನಿಧಿಗಳು, ಇತರೇ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ನೀವು ಕಾನೂನು ಹೋರಾಟ ಮಾಡುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಸೌಜನ್ಯಾ ಪರವಾಗಿ ಹೋರಾಟ ನಡೆಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಕೀಲರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಇದರ ಜೊತೆಗೆ ಒಕ್ಕಲಿಗರ ಸಮುದಾಯದಿಂದ ಧ್ವನಿಯೆತ್ತಲು ಬಾಲಗಂಗಾಧರ ನಾಥ ಸ್ವಾಮೀಜಿ ಅವರನ್ನು ಭೇಟಿ ಆಗಲಿದ್ದೇವೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಒಕ್ಕಲಿಗರ ಸಂಘದ ತಾಲೂಕು ಘಟಕದ ಪ್ರಮುಖರಾದ ಚಂದ್ರ ಕೋಲ್ಚಾರ್, ಗುರುದೇವ್ ಯು.ಬಿ, ಸುರೇಶ್ ಬೈಲು, ವಿಶ್ವನಾಥ್, ಕುಶಾಲಪ್ಪ ಗೌಡ, ಮೋನಪ್ಪ ಗೌಡ, ರಕ್ಷಿತ್ ಸುತ್ತಿಲ, ಕಿರಣ್ ಬುಡ್ಲೆಗುತ್ತು ಮತ್ತಿತರರಿದ್ದರು.

Sowjnaya rape case, September 11 to 13 protest by Vokkaligas near DC office in Mangalore.