ಬ್ರೇಕಿಂಗ್ ನ್ಯೂಸ್
30-08-23 11:05 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ನಡೆದಿದೆ.
ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.
Mangalore City #bus conductor thrown out of speeding bus at Nantoor circle in #Mangalore, dies at hospital, #video goes viral. Traffic police and the public rushed him to the hospital, but he breathed his last. pic.twitter.com/URwRUxD7tF
— Headline Karnataka (@hknewsonline) August 30, 2023
Mangalore City Bus conductor thrown out of speeding bus at nanthoor in Mangalore, dies at hospital, video viral. The deceased bus conductor has been identified as Hiraya (23) year old youth. The video of this has gone viral on social media.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm