ಬ್ರೇಕಿಂಗ್ ನ್ಯೂಸ್
30-08-23 10:36 pm Mangalore Correspondent ಕರಾವಳಿ
ಉಳ್ಳಾಲ, ಆ.30: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಷ್ಮಾ ಜನಾರ್ಧನ್ (56) ಅವರು ಮಾರಕ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ದೇರಳಕಟ್ಟೆ ಕಾಯರ್ ಪಳಿಕೆಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿಯಾಗಿದ್ದ ಸುಷ್ಮಾ ಅವರು ಬಿಜೆಪಿ ತಳಮಟ್ಟದ ಕಾರ್ಯಕರ್ತೆಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಫರ್ಧಿಸಿ ಜಯ ಗಳಿಸಿದ್ದಲ್ಲದೆ, ಜಿಲ್ಲಾ ಪಂಚಾಯತ್ನ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಬಿಜೆಪಿ, ಜೆಡಿಎಸ್ 20-20 ಸರಕಾರದಲ್ಲಿ ಸಚಿವರಾಗಿದ್ದ ನಾಗರಾಜ ಶೆಟ್ಟಿಯವರ ಅವಧಿಯಲ್ಲಿ ಸುಷ್ಮಾ ಜನಾರ್ಧನ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಸುಷ್ಮಾ ಅವರಿಗೆ ಕೆಳ ವರ್ಷಗಳ ಹಿಂದೆ ಕ್ಯಾನ್ಸರ್ ವಕ್ಕರಿಸಿದ್ದರೂ ಚಿಕಿತ್ಸೆ ಪಡೆದು ಗುಣಮುಖರಾಗಿ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಇತ್ತೀಚಿಗೆ ಮತ್ತೆ ಕರುಳು ಕ್ಯಾನ್ಸರ್ ಉಲ್ಬಣಗೊಂಡು ಹಾಸಿಗೆ ಹಿಡಿದಿದ್ದ ಸುಷ್ಮಾ ಅವರು ಬುಧವಾರ ಮೃತಪಟ್ಟಿದ್ದಾರೆ.
ಪದವೀಧರೆಯಾಗಿದ್ದ ಅವರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪಕ ನಿರ್ದೇಶಕಿ, ಭಾರತೀಯ ಜೀವವಿಮಾ ನಿಗಮದ ಹಿರಿಯ ಪ್ರತಿನಿಧಿಯಾಗಿದ್ದರು. ಮೃತ ಸುಷ್ಮಾ ಅವರು ಪತಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ನಾಳೆ ಮಧ್ಯಾಹ್ನ ಅವರ ಸ್ವಗೃಹದಲ್ಲಿ ಜರುಗಲಿದೆ. ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸುಷ್ಮಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
Dakshina Kannada Former jilla panchyath president Sushma Janardhan passes away at 56 in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm