ಬ್ರೇಕಿಂಗ್ ನ್ಯೂಸ್
05-09-23 02:16 pm Mangalore Correspondent ಕರಾವಳಿ
ಮಂಗಳೂರು, ಸೆ.5: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕರನ್ನು ಕುಳ್ಳಿರಿಸಿ ಮನವಿಯನ್ನು ಕೇಳಿದ ಸಿದ್ದರಾಮಯ್ಯ, ಸೌಜ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಕೋರ್ಟ್ ಈಗಾಗಲೇ ಪ್ರಕರಣದ ಬಗ್ಗೆ ತೀರ್ಪು ನೀಡಿದೆ. ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಯನ್ನು ಹಿಡಿದು ಕೊಟ್ಟಿದ್ದಾರೆ. ಆದರೆ ಆರೋಪದ ಬಗ್ಗೆ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಕೋರ್ಟ್ ಖುಲಾಸೆ ಮಾಡಿದೆ. ಹೀಗಿದ್ದ ಮೇಲೆ ನಾವು ಮರು ತನಿಖೆ ಮಾಡೋಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ನನ್ನನ್ನು ಭೇಟಿಯಾಗಲು ಬಂದ ಸೌಜನ್ಯಾ ಪೋಷಕರಿಗೂ ತಿಳಿಸಿದ್ದೇನೆ. ನಾನು ಈ ಬಗ್ಗೆ ಕಾನೂನು ಸಲಹೆಯನ್ನು ಕೇಳಿದ್ದೇನೆ. ಸೌಜನ್ಯಾ ಪೋಷಕರು ಕೋರ್ಟಿಗೆ ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುತ್ತದೆ. ನೀವುಗಳು ಬಂದಿರುವುದರಿಂದ ಮತ್ತೊಮ್ಮೆ ಕಾನೂನು ಸಲಹೆ ಕೇಳುತ್ತೇನೆ. ಮರು ತನಿಖೆಗೆ ಅವಕಾಶ ಇದ್ದರೆ ಆದೇಶ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಶಾಸಕರ ನಿಯೋಗದಲ್ಲಿ ಸುನಿಲ್ ಕುಮಾರ್, ಭರತ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಇದ್ದರು.
BJP leaders meet CM Siddaramaiah to reinvestigate the case of Soujanya rape and murder.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm