ಬ್ರೇಕಿಂಗ್ ನ್ಯೂಸ್
05-09-23 09:06 pm Mangalore Correspondent ಕರಾವಳಿ
ಮಂಗಳೂರು, ಸೆ.5 : ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ನಿಗ್ರಹಿಸಿ ಸ್ವಚ್ಛ ಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿರುವುದು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯಕ್ಕೆ ಹೊಡೆತ ನೀಡಿದಂತಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ದೃಢ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮಿಷನರ್ ಅವರನ್ನು ಕೇವಲ ಐದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಿದೆ. ಈಮೂಲಕ ಡ್ರಗ್ಸ್ ರೀತಿಯ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ರೀತಿಯ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಲಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಡ್ರಗ್ಸ್ ಜಾಲ ಮತ್ತೆ ಜಾಲ ಬಿಚ್ಚಿ, ಜನಸಾಮಾನ್ಯರಿಗೆ ಕಂಟಕವಾದಲ್ಲಿ ಬಿಜೆಪಿ ಪಕ್ಷದ ವತಿಯಿಂದಲೇ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Mangalore Police Commissioner Kuldeep Kumar Jain transfer, BJP MLA Bharath Shetty slams Congress. Says a honest officer who was tirelessly working to make Mangalore Drug free was transferred in just 5 months of posting.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm