ಬ್ರೇಕಿಂಗ್ ನ್ಯೂಸ್
05-09-23 10:12 pm Mangalore Correspondent ಕರಾವಳಿ
ಮಂಗಳೂರು, ಸೆ.6: ಪ್ರಧಾನಿ ಮೋದಿಯವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗಷ್ಟೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾರ್ಯಕರ್ತರ ದುಡಿಮೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. ಬಿಜೆಪಿ ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಎಬ್ಬಿಸಿ ಬಿಜೆಪಿ ತನ್ನ ಬೇಳೆ ಬೇಯಿಸುತ್ತದೆ. ಆದರೆ, ಕಾಂಗ್ರೆಸ್ ತನ್ನ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.


ಚುನಾವಣೆ ದೃಷ್ಟಿಯಿಂದ ಗ್ಯಾಸ್ ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದ ಜಮೀರ್, ಮುಂದಿನ ಲೋಕಸಭೆ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯ ಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಐವನ್ ಡಿಸೋಜ, ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್.ಕೆ, ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನಾಯಕರುಗಳು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್.ಎಸ್ ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.
Achhe din is only for BJP by modi not for the people slams Zameer Ahmed Khan in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am