ಬ್ರೇಕಿಂಗ್ ನ್ಯೂಸ್
06-09-23 11:46 am Mangalore Correspondent ಕರಾವಳಿ
ಮಂಗಳೂರು,ಸೆ.6: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ.
ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.


ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲೇ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ತರಾಟೆಗೆತ್ತಿಕೊಂಡಿದ್ದಲ್ಲದೆ, ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ, ಹಾಸ್ಟೆಲ್ ಉಸ್ತುವಾರಿ ಹೊಂದಿರುವ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು.
Mangalore Zameer Ahmed inspects Minority department hostel at Kankandy, bad rooms and toilet turns Minister angry.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm