ಬ್ರೇಕಿಂಗ್ ನ್ಯೂಸ್
07-09-23 07:54 pm Mangalore Correspondent ಕರಾವಳಿ
ಮಂಗಳೂರು, ಸೆ.7: ಮಂಗಳೂರು ಕಮಿಷನರ್ ಜಾಗಕ್ಕೆ ಹೊಸತಾಗಿ ನೇಮಕಗೊಂಡಿರುವ ಅನುಪಮ್ ಅಗರ್ವಾಲ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಕಮಿಷನರ್ ಕುಲದೀಪ್ ಜೈನ್ ಅವರು ಹೊಸ ಕಮಿಷನರ್ ಆಗಿ ನೇಮಕಗೊಂಡ ಅಗರ್ವಾಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಕುಲದೀಪ್ ಜೈನ್ ಅವರನ್ನು ಕರ್ತವ್ಯದ ನಡುವಲ್ಲೇ ಕೇವಲ ಐದು ತಿಂಗಳಲ್ಲಿ ವರ್ಗಾಯಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಕುಲದೀಪ್ ಕಮಿಷನರ್ ಆಗಿದ್ದ ಅವಧಿಯಲ್ಲಿ ಕ್ರೈಮ್ ರೇಟ್ ಕಡಿಮೆಯಾಗಿತ್ತು. ಅಲ್ಲದೆ, ಡ್ರಗ್ಸ್ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನಮನ್ನಣೆ ಪಡೆದಿದ್ದರು. ಹೀಗಾಗಿ ದಿಢೀರ್ ವರ್ಗಾವಣೆ ಆದೇಶಕ್ಕೆ ಕುಲದೀಪ್ ಜೈನ್ ಡ್ರಗ್ಸ್ ವಿರುದ್ಧ ಸಮರ ಸಾರಿದ್ದೇ ಕಾರಣವೆಂದು ಸಾರ್ವಜನಿಕ ವಲಯದಿಂದ ಆಕ್ಷೇಪ ಕೇಳಿಬಂದಿತ್ತು.

ಅಧಿಕಾರ ಸ್ವೀಕರಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ಅನುಪಮ್ ಅಗರ್ವಾಲ್, ರಾಜ್ಯದಲ್ಲಿಯೇ ಮಂಗಳೂರು ನಗರ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿದ್ದು ಇಲ್ಲಿ ಕೆಲಸ ಅಂದ್ರೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ಬೀಟ್ ವ್ಯವಸ್ಥೆ ಮೂಲಕ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಹೇಳಿದ್ದಾರೆ. ಫೋನ್ ಇನ್ ಕಾರ್ಯಕ್ರಮ ಸಮಸ್ಯೆಗಳ ಸ್ಪಂದನೆಗೆ ಉತ್ತಮ ವೇದಿಕೆಯಾಗಿದ್ದು ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ತಿಳಿಸಿದರು.
ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮಂಗಳೂರಿನ ಡ್ರಗ್ಸ್ ಸಮಸ್ಯೆಗಳ ಬಗ್ಗೆ ಕೇಳಿದ್ದೇನೆ. ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ಸು ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಅಭಿಯಾನ ಮುಂದುವರಿಸುತ್ತೇನೆ ಎಂದರು.
ಈ ಭಾಗದಲ್ಲಿ ಅನೈತಿಕ ಪೊಲೀಸ್ಗಿರಿ ನಡೆಯುವ ಬಗ್ಗೆಯೂ ಅರಿವಿದೆ. ಈ ಕೃತ್ಯದಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇನೆ. ಜೊತೆಗೆ ಅನೈತಿಕ ಪೊಲೀಸ್ಗಿರಿ ಕೃತ್ಯಗಳಿಗೆ ಬೆಂಬಲ ಕೊಡುವವರನ್ನೂ ಕಾನೂನಿನಡಿ ತರುವ ಕೆಲಸ ಮಾಡುತ್ತೇನೆ ಎಂದು ಎಚ್ಚರಿಸಿದರು.
ಅನುಪಮ್ ಅಗರ್ವಾಲ್ ರಾಜಸ್ಥಾನದ ಜೋಧಪುರ್ ಮೂಲದವರಾಗಿದ್ದು ಈ ಹಿಂದೆ ಈಶಾನ್ಯ ವಿಭಾಗದಲ್ಲಿ ಡಿಐಜಿ ರೇಂಜ್ ಅಧಿಕಾರಿಯಾಗಿದ್ದರು. ಐಪಿಎಸ್ ಅಧಿಕಾರಿಯಾಗಿ ಮೊದಲ ಬಾರಿಗೆ ದಾವಣಗೆರೆ ಎಎಸ್ಪಿಯಾಗಿ ಕೆಲಸ ಮಾಡಿದ್ದರು. ಆನಂತರ, ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿದ್ದರು. ಬಳಿಕ ರಾಮನಗರ ಮತ್ತು ವಿಜಯಪುರ ಎಸ್ಪಿಯಾಗಿ ಕೆಲಸ ಮಾಡಿದ್ದರು.
Anupam Agrawal is new Mangalore Police Commissioner, promises of drug free city, moral policing. The 2008-batch IPS officer Anupam Agrawal has been posted as the new Mangaluru Police Commissioner replacing incumbent 2011-batch IPS officer Kuldeep Kumar R. Jain, who was posted to Mangaluru in February, 2023.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm