ಬ್ರೇಕಿಂಗ್ ನ್ಯೂಸ್
09-09-23 12:24 pm Mangalore Correspondent ಕರಾವಳಿ
ಮಂಗಳೂರು, ಸೆ.9: ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಉಪನ್ಯಾಸ ವಿರೋಧಿಸಿ ಮಂಗಳೂರು ವಿವಿ ಕಾಲೇಜಿಗೆ ಎಬಿವಿಪಿ ಮುತ್ತಿಗೆ ಹಾಕಲು ಯತ್ನಿಸಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಗೇಟ್ ಬಳಿ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಪ್ರತಿಷ್ಠಾನ ದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟಿಸುತ್ತಿದ್ದಾರೆ.









ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ ಶಂಸುಲ್ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ ಎಂದಿದ್ದಕ್ಕೆ ಎಬಿವಿಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿರೋಧದ ನಡುವೆಯೂ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕಾರ್ಯಕ್ರಮ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ಮಾಡಿದೆ. ಆ ಕಾರಣದಿಂದಲೇ ಪ್ರತಿಭಟನೆ ಆರಂಭವಾಗಿದೆ. ಹಲವು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ಅವರು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂಬುದು ಆಕ್ರೋಷಕ್ಕೆ ಕಾರಣವಾಗಿದೆ. ಸಂಘ ಪರಿವಾರದ ತೀವ್ರ ವಿರೋಧಿಯಾಗಿರುವ ಡಾ ಶಂಸುಲ್ ಇಸ್ಮಾಂ ಉಪನ್ಯಾಸಕ್ಕೆ ಕರೆಸಲಾಗಿದೆ. ಪ್ರಧಾನಿ ಮೋದಿ ವಿರೋಧಿಯಾಗಿರುವ ಡಾ ಶಂಸುಲ್ ಇಸ್ಮಾಂ ಅವರು ಉಪನ್ಯಾಸ ಮಾಡಬಾರದು ಎಂಬುದು ವಿದ್ಯಾರ್ಥಿಗಳ ವಾದವಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವುದನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆಯಾಗಿದೆ
ABVP opposes Islam’s lecture by Shamsul from delhi at Mangalore University, many students taken to custody by Police. Akhil Bharatiya Vidyarthi Parishad (ABVP) members staged a protest at the Mangalore University campus opposing the lecture of noted researcher, author and former associate professor of political science at the University of Delhi Dr Shamsul Islam. The ABVP workers raised slogans against the professor and tried to enter the University but were stopped by the police.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm