ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm