ಬ್ರೇಕಿಂಗ್ ನ್ಯೂಸ್
14-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.14: ಚೈತ್ರಾ ಕುಂದಾಪುರ ಪ್ರಕರಣ ಮತ್ತು ಆಕೆಯ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ತನಿಖೆ ಆಗಲಿ, ಎಲ್ಲವೂ ಸ್ಷಷ್ಟ ಆಗಲಿದೆ. ದೊಡ್ಡ ದೊಡ್ಡ ಹೆಸರು ಇದೆ ಅಂತ ಈಗ ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳ್ತಾರೆ. ತನಿಖೆ ಆಗಿ ಅದರ ಸತ್ಯ ಹೊರಬರಲಿ ಎಂದರು ಬೊಮ್ಮಾಯಿ.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಮಾತುಕತೆ ಆಗಿರುವುದು ಸ್ಪಷ್ಟ. ಆದರೆ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ಈ ಬಗ್ಗೆ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನ ಮಾತನಾಡಿಸಿ ತೀರ್ಮಾನ ತಗೋತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಈ ಮೈತ್ರಿಯ ಉದ್ದೇಶ. ಈ ವಿಚಾರದಲ್ಲಿ ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದು ಹೇಳಿದರು.
We have nothing to do with the Chaitra Kundapur case and her business. Former Chief Minister Basavaraj Bommai said that there should be a thorough probe into the case and whoever is involved should be punished severely.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm