ಬ್ರೇಕಿಂಗ್ ನ್ಯೂಸ್
16-09-23 09:22 pm Mangalore Correspondent ಕರಾವಳಿ
ಮಂಗಳೂರು, ಸೆ.16: ಕಾಂಗ್ರೆಸ್ ಸರ್ಕಾರ ಆರಂಭದಲ್ಲೇ ತಪ್ಪು ಹೆಜ್ಜೆಗಳನ್ನು ಇಟ್ಟಿದೆ. ಅಧಿಕಾರ ಕೊಟ್ಟ ತಪ್ಪಿಗೆ ಬೆಲೆ ಏರಿಕೆ ಬಿಸಿ ಜನರಿಗೆ ತಟ್ಟಿದೆ. ಕರೆಂಟ್, ಅಬಕಾರಿ, ನೋಂದಣಿ ಶುಲ್ಕ, ಬಸ್ ದರ ಹೆಚ್ಚಳ ಆಗಿದೆ. ಇದರ ಜೊತೆಗೆ ಬರವೂ ನಮ್ಮನ್ನ ಕಾಡ್ತಿದೆ. ಕಾಕತಾಳೀಯವೋ ಕಾಲ್ಗುಣವೋ ಗೊತ್ತಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ಬರ ಬಂದಿದ್ದನ್ನು ನೋಡಿದ್ದೇವೆ. ಇದು ಕಾಕತಾಳೀಯ ಅಂತ ಹೇಳಲ್ಲ, ಇದು ಕಾಂಗ್ರೆಸ್ ಕಾಲ್ಗುಣವೂ ಹೌದು. ಹೀಗೆಂದು ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಆಡಳಿತದ ಅವಧಿಯಲ್ಲೂ ಬರ ಪರಿಸ್ಥಿತಿ ಬಂದಿದೆ. 1999, 2004, 2013 ಹೀಗೆ ಪ್ರತಿ ಬಾರಿಯೂ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೇರಿದಾಗ, ಬರ ಕಾಣಿಸಿಕೊಂಡಿತ್ತು. ಇದನ್ನು ಮೂಢ ನಂಬಿಕೆ ಅನ್ನಕ್ಕಾಗಲ್ಲ. ಇವರ ಕಾಲ್ಗುಣ ಎನ್ನಬೇಕು ಎಂದರು.
ಇದರ ಜೊತೆಗೆ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನೋದು ಕಾಣ್ತಾ ಇದೆ. ಹರಿಪ್ರಸಾದ್ ಹೂಬ್ಲೋಟ್ ವಾಚ್, ಪಂಚೆಯೊಳಗಿನ ಖಾಕಿ ಚೆಡ್ಡಿ ಅಂತೆಲ್ಲ ಸಿದ್ದರಾಮಯ್ಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸದ್ಯ ಎಐಸಿಸಿ ಅವರಿಗೆ ನೋಟೀಸ್ ಕೊಟ್ಟಿದೆ. ಆದರೆ ಇವರ ಹಿಂದೆ ಡಿಕೆ ಶಿವಕುಮಾರ್ ಯೋಜನೆ ಇದೆ ಅಂತ ಹೇಳಲಾಗ್ತಿದೆ. ಈ ಮಧ್ಯೆ ರಾಜಣ್ಣ ಮೂರು ಜನ ಡಿಸಿಎಂ ಬಗ್ಗೆ ಮಾತನಾಡಿದ್ದಾರೆ. ಇವರ ಮಾತಿನ ಹಿಂದೆ ಸಿಎಂ ಸಿದ್ದರಾಮಯ್ಯ ಯೋಜನೆ ಇದೆ ಎನ್ನುವ ಮಾತು ಕೇಳಿಬರುತ್ತಿದೆ ಎಂದರು.
ಸಿದ್ದರಾಮಯ್ಯ ವಿರುದ್ಧ ಕೇಸು ದಾಖಲಿಸಿ
ಸಿದ್ದರಾಮಯ್ಯ ಮನುಸ್ಮೃತಿಯನ್ನು ಸಂವಿಧಾನಕ್ಕೆ ಹೇರುವ ಯತ್ನ ಆಗ್ತಿದೆ ಎಂದಿದ್ದಾರೆ. ದೇಶದಲ್ಲಿ ಸಾವಿರಾರು ರಾಜರು ಆಳ್ವಿಕೆ ನಡೆಸಿದ್ದಾರೆ. ಆದರೆ ಯಾವ ರಾಜರೂ ಮನುಸ್ಮೃತಿಯನ್ನ ಸಂವಿಧಾನ ಆಗಿ ಬಳಸಿಲ್ಲ. ಸದ್ಯ ಯಾವ ರಾಜ್ಯವೂ ಮನುಸ್ಮೃತಿಯನ್ನ ಆಡಳಿತದ ಭಾಗ ಮಾಡ್ತೀವಿ ಅಂತ ಹೇಳಿಲ್ಲ. ಹೀಗಿರುವಾಗ ಸಿದ್ದರಾಮಯ್ಯ ಯಾವ ಆಧಾರದ ಮೇಲೆ ಈ ಹೇಳಿಕೆ ಕೊಟ್ಟರು. ಸುಳ್ಳು ಸುದ್ದಿ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಬೇಕು ಅಂತ ಹೇಳಿದ್ರೀ, ಮನುಸ್ಮೃತಿ ಹೇರಿಕೆ ವಿಚಾರದಲ್ಲಿ ಮತ್ತೆ ಸಿದ್ದರಾಮಯ್ಯ ಸುಳ್ಖು ಹೇಳಿದ್ದಾರೆ. ಹೀಗಾಗಿ ಇದರ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಸುಮೋಟೋ ಕೇಸ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದರು.
ಸರ್ಕಾರದ ಒಬ್ಬ ಸಚಿವ ಸುಧಾಕರ್ ದಲಿತರ ಮೇಲೆ ಜಾಗ ಕಬಳಿಸಿ ದೌರ್ಜನ್ಯ ಮಾಡಿದಾರೆ. ಪ್ರಕರಣ ದಾಖಲಾಗಿರೋವಾಗ ಅವರನ್ನು ಸಂಪುಟದಿಂದ ಕೈ ಬಿಟ್ಟು ತನಿಖೆ ಎದುರಿಸಲಿ. ಎಲ್ಲಾ ಖಾತೆಗಳ ಜಿಪಿಎ ತೆಗೊಂಡಂತೆ ಆಡ್ತಿರುವ ಪ್ರಿಯಾಂಕ ಖರ್ಗೆ, ಸುಧಾಕರ್ ವಿಚಾರದಲ್ಲಿ ಯಾಕೆ ಮಾತನಾಡ್ತಿಲ್ಲ ಎಂದು ಪ್ರಶ್ನಿಸಿದ ಸಿಟಿ ರವಿ, ವರ್ಗಾವಣೆ ವಿಚಾರದಲ್ಲಿ ಅಕ್ರಮ ನಡೀತಾ ಇದೆ. 115 ಅಧಿಕಾರಿಗಳನ್ನು ಜಾಗ ತೋರಿಸದೆ ವರ್ಗಾವಣೆ ಮಾಡಿದ್ದಾರೆ. ಕಪ್ಪ ಕಾಣಿಕೆ ಕೊಟ್ಟವರಿಗೆ ವರ್ಗಾವಣೆ ಮಾಡಿ ಜಾಗ ತೋರಿಸ್ತಾ ಇದಾರೆ. ಕಪ್ಪ ಕೊಡದವರಿಗೆ ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡ್ತಿದಾರೆ ಎಂದು ಟೀಕಿಸಿದರು.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದ್ರೆ, ಶಾಸಕ ವೇದವ್ಯಾಸ ಕಾಮತ್, ಮೋನಪ್ಪ ಭಂಡಾರಿ ಮತ್ತಿತರರಿದ್ದರು.
People in Karnataka facing wrath of rising prices under Congress says C T Ravi in Mangalore.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 01:23 pm
HK News Desk
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm