ಬ್ರೇಕಿಂಗ್ ನ್ಯೂಸ್
19-09-23 10:56 pm Mangalore Correspondent ಕರಾವಳಿ
ಮಂಗಳೂರು, ಸೆ.19 : "ಬಂಟರ ಯಾನೆ ನಾಡವರ ಮಾತೃಸಂಘದ ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ. ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಗ್ಗೂಡಿಸಿ ನಡೆಯುವ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ. ನಾನು ಸ್ಪೀಕರ್ ಆದ ಬಳಿಕ ಪ್ರತಿಪಕ್ಷಗಳಿಗೆ ಹೆಚ್ಚಿನ ಅವಕಾಶ ಕೊಟ್ಟು ಸರಕಾರವನ್ನು ಸೂಕ್ತ ರೀತಿಯಲ್ಲಿ ನಡೆಯಲು ನನ್ನಿಂದಾದ ಸಹಕಾರ ನೀಡುತ್ತಿದ್ದೇನೆ. ಆದರೆ ಇದೇ ಕಾರಣಕ್ಕೆ ಸ್ಪೀಕರ್ ಸರಿಯಿಲ್ಲ ಎನ್ನುವವರೂ ಇದ್ದಾರೆ. ವಿಧಾನಸಭೆಯಲ್ಲಿ ನಡೆಯುವ ಗಲಾಟೆಗಳು ಕೇವಲ ಅಲ್ಲಿಗೆ ಮಾತ್ರ ಸೀಮಿತವಾಗಿರುತ್ತೆ ಹೊರಗಡೆ ಎಲ್ಲಾ ಪಕ್ಷಗಳ ನಾಯಕರು ಹೆಗಲ ಮೇಲೆ ಕೈಹಾಕಿಕೊಂಡು ಸ್ನೇಹಿತರಂತೆ ಇರುತ್ತಾರೆ. ಹೀಗಾಗಿ ಕೇವಲ ಗಲಾಟೆಯನ್ನು ಮಾತ್ರ ಟಿವಿಯಲ್ಲಿ ನೋಡಿ, ಇಲ್ಲಿ ಗಲಾಟೆ ಮಾಡಿಕೊಳ್ಳಬೇಡಿ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕಿವಿಮಾತು ಹೇಳಿದ್ದಾರೆ.
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೆಲ್, ಓಂಕಾರ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದರು.
"ಬಂಟ್ಸ್ ಹಾಸ್ಟೆಲ್ ನಲ್ಲಿ ಕೇವಲ ಬಂಟರು ಮಾತ್ರವಲ್ಲದೆ ಹಿಂದೂ ಮುಸ್ಲಿಂ ಕ್ರೈಸ್ತರು ಎಲ್ಲರೂ ವಾಸ್ತವ್ಯವಿದ್ದು ಕಲಿಯುತ್ತಿದ್ದಾರೆ. ಇದು ಇಡೀ ಸಮಾಜಕ್ಕೆ ಮಾದರಿ. ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಬಂಟ ಸಮಾಜಕ್ಕೆ ಇದ್ದು ಆ ಜವಾಬ್ದಾರಿಯನ್ನು ಬಂಟ ಸಮುದಾಯದ ಹಿರಿಯರು ತೆಗೆದುಕೊಳ್ಳಬೇಕು. ಗಣೇಶೋತ್ಸವ ಅನ್ನುವ ಧಾರ್ಮಿಕ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸಲಿ, ಗಣೇಶನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ" ಎಂದು ಶುಭ ಹಾರೈಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ.ಎಮ್ ಶೆಟ್ಟಿ, ಕೋಶಾಧಿಕಾರಿ ರಾಮಮೋಹನ್ ರೈ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ, ಜಿಲ್ಲಾ ಸಂಚಾಲಕ ಬಿ.ನಾಗರಾಜ ಶೆಟ್ಟಿ, ಎಂ. ಸಂಜೀವ ಶೆಟ್ಟಿ ಕಾಸರಗೋಡು ಉಪಸ್ಥಿತರಿದ್ದರು.
"All the programmes of Bantara Yane Nadavara Matru Sangha are held in a grand manner. Let events like Ganeshotsav, which bring together people from all sections of the society, be a model for the society.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm