ಬ್ರೇಕಿಂಗ್ ನ್ಯೂಸ್
22-09-23 06:02 pm Mangalore Correspondent ಕರಾವಳಿ
ಉಳ್ಳಾಲ, ಸೆ.22: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Kotekar health care hospital negligence, DHO alerts in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm