ಬ್ರೇಕಿಂಗ್ ನ್ಯೂಸ್
01-10-23 08:31 pm Mangalore Correspondent ಕರಾವಳಿ
ಮಂಗಳೂರು, ಅ.1: ಮಂಗಳೂರಿನಲ್ಲಿ ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮದ ಮೂಲಕ ಹೆಸರು ಮಾಡಿದ್ದ ಪ್ರಕಾಶ್ (43) ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕದ್ರಿಯ ಮೌರಿಷ್ಕಾ ಅಪಾರ್ಟ್ಮೆಂಟ್ ನಲ್ಲಿರುವ ಮನೆಯಲ್ಲಿ ಭಾನುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷಗಳ ಹಿಂದೆಯೇ 1972ರ ವೇಳೆಗೆ ಜಯರಾಮ ಶೇಖ ಅವರು ಮಹೇಶ್ ಬಸ್ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು. ಮೊದಲಿಗೆ ಜ್ಯೋತಿ ಎಂದಿದ್ದ ಹೆಸರನ್ನು ಬಳಿಕ ಎರಡನೇ ಮಗ ಮಹೇಶ್ ಹೆಸರಿಗೆ ಬದಲಿಸಿದ್ದರು. ಆರಂಭದಿಂದಲೇ ಮಂಗಳೂರಿನಿಂದ ಕೊಣಾಜೆ ರೂಟಿನಲ್ಲಿ ಬಸ್ ಉದ್ಯಮ ಆರಂಭಿಸಿದ್ದರು. ಆನಂತರ ಇತರ ರೂಟಿನಲ್ಲೂ ಮಹೇಶ್ ಬಸ್ ಸಂಚಾರ ಆರಂಭಿಸಿತ್ತು. ಮೂರನೇ ಮಗ ಪ್ರಕಾಶ್ ಶೇಖ ಉದ್ಯಮದಲ್ಲಿ ತೊಡಗಿಸಿಕೊಂಡ ಬಳಿಕ ವ್ಯವಹಾರ ವಿಸ್ತರಣೆಯಾಗಿತ್ತು.
ಕಳೆದ 15 ವರ್ಷಗಳಲ್ಲಿ ಮಹೇಶ್ ಹೆಸರಲ್ಲಿ ಟೂರಿಸ್ಟ್ ಉದ್ಯಮ, ಟಿಪ್ಪರ್, ಸಿಮೆಂಟ್ ಮಿಕ್ಸರ್ ಲಾರಿ ಹೀಗೆ ಹಲವಾರು ವ್ಯವಹಾರ ಮಾಡಿಕೊಂಡಿದ್ದರು. ಹಿರಿಯ ಪುತ್ರರಿಬ್ಬರು ಬೆಂಗಳೂರು, ಮುಂಬೈನಲ್ಲಿ ನೆಲೆಸಿದ ಬಳಿಕ ಪೂರ್ತಿ ಬಸ್ ಉದ್ಯಮದ ವ್ಯವಹಾರವನ್ನು ಪ್ರಕಾಶ್ ಅವರೇ ನೋಡಿಕೊಂಡಿದ್ದರು. ಆಪ್ತರ ಪ್ರಕಾರ, ನೂರಕ್ಕೂ ಹೆಚ್ಚು ಬಸ್ಗಳು ಅವರ ಒಡೆತನದಲ್ಲಿದ್ದವು. ಹಲವಾರು ಬಸ್ ಗಳನ್ನು ಬೇರೆ ಬೇರೆ ಕಡೆ ಖಾಸಗಿಯಾಗಿ ಕಾಂಟ್ರಾಕ್ಟ್ ಕೊಟ್ಟಿದ್ದರು. ಪ್ರಕಾಶ್ ಅವರು ಪತ್ನಿ ಮಕ್ಕಳ ಜೊತೆಗೆ ಕದ್ರಿಯ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. 80ರ ಹರೆಯದ ಜಯರಾಮ ಶೇಖ ಕುಲಶೇಖರದ ನಿವಾಸದಲ್ಲಿಯೇ ನೆಲೆಸಿದ್ದಾರೆ.
ಇಂದು ಬೆಳಗ್ಗೆ ಹೊರಗೆ ಹೋಗಿ ಬಂದಿದ್ದ ಪ್ರಕಾಶ್ ಮತ್ತೆ ಬೆಡ್ ರೂಮಿಗೆ ತೆರಳಿದ್ದರು. ಮಧ್ಯಾಹ್ನ ನೋಡಿದರೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪತ್ನಿ ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಬಸ್ ಮಾಲಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿ, ಪ್ರಕಾಶ್ ತುಂಬ ಒಳ್ಳೆಯ ವ್ಯಕ್ತಿಯಾಗಿದ್ದರು. ಅವರ ತಂದೆಯ ಕಾಲದಿಂದಲೂ ಒಡನಾಟ ಇದೆ. ಜಿಲ್ಲಾ ಬಸ್ ಮಾಲಕರ ಸಂಘ ಗಾಢ ಶೋಕ ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
Mahesh travels bus owner Prakash Sheka commits suicide at his house in Mangalore. He owns more than 100 private buses in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm