ಬ್ರೇಕಿಂಗ್ ನ್ಯೂಸ್
02-10-23 12:10 pm Mangalore Correspondent ಕರಾವಳಿ
ಮಂಗಳೂರು, ಅ.2: ಶಿವಮೊಗ್ಗ ಈದ್ ಮಿಲಾದ್ ಸಂಘರ್ಷವನ್ನ ಖಂಡಿಸುತ್ತೇನೆ. ಮೊನ್ನೆ ಗಣೇಶ ಚತುರ್ಥಿ ಉತ್ಸವ ಯಾವುದೇ ಗಲಾಟೆ ನಡೆಯದೇ ಶಾಂತಿಯುತವಾಗಿ ನಡೆದಿತ್ತು. ಆದರೆ ಅದೇ ಶಿವಮೊಗ್ಗದಲ್ಲಿ ಈದ್ ಮಿಲಾದ್ ಹೆಸರಲ್ಲಿ ಕಲ್ಲು ತೂರಾಟ ಮಾಡಿದ್ದಾರೆ. ಈ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಗಲಾಟೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈದ್ ಮೆರವಣಿಗೆಯ ಸಂದರ್ಭದಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈ ರೀತಿ ಆಗಿದೆ. ರಾಜ್ಯದಲ್ಲಿ ಪಾಕಿಸ್ತಾನ ಧ್ವಜ, ಪಾಕ್ ಪರ ಘೋಷಣೆ ಆಗ್ತಾ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಾಣ್ತಿದ್ದೇವೆ. ಮಂಗಳೂರು ಕುಕ್ಕರ್ ಬಾಂಬ್ ನಲ್ಲೂ ಶಿವಮೊಗ್ಗದ ನಂಟು ಕಂಡುಬಂದಿತ್ತು. ಭಟ್ಕಳ ಬ್ರದರ್ಸ್ ರೀತಿಯಲ್ಲಿ ತೀರ್ಥಹಳ್ಳಿ ಬ್ರದರ್ಸ್ ಮೂಲಕ ಭಯೋತ್ಪಾದಕ ಚಟುವಟಿಕೆ ಆಗ್ತಿದೆ.
ಆದರೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳದೇ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ವಿಫಲವಾಗಿದೆ. ಈ ಘಟನೆಯಲ್ಲಿ ಆತಂಕವಾದದ ಸಾಧ್ಯತೆ ಇದೆಯಾ ಅಂತ ತನಿಖೆ ಮಾಡಬೇಕು. ಇದರ ಪೂರ್ಣ ತನಿಖೆ ಆಗಲಿ, ಇದು ಸರ್ಕಾರದ ಪೂರ್ಣ ವೈಫಲ್ಯ. ಸಿಎಂ ಸಿದ್ದರಾಮಯ್ಯ ತಮ್ಮ ಮತಬೇಟೆಗಾಗಿ ಇದರ ವಿರುದ್ದ ಕ್ರಮ ಕೈಗೊಳ್ತಾ ಇಲ್ಲ.
ಶಿವಮೊಗ್ಗದಲ್ಲಿ ಹರ್ಷ ಮತ್ತು ಪ್ರವೀಣ್ ಹತ್ಯೆ ಬಳಿಕ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿತ್ತು. ಈ ಸರ್ಕಾರ ಇಂತಹ ವಿಚಾರದಲ್ಲಿಯೂ ಸಣ್ಣ ಮಟ್ಟದ ರಾಜಕಾರಣ ಮಾಡ್ತಾ ಇದೆ. ತುಷ್ಟೀಕರಣ ನೀತಿ ಮೂಲಕ ಮತಾಂಧ ಶಕ್ತಿಗಳಿಗೆ ಮತ್ತೆ ಧೈರ್ಯ ಬಂದಿದೆ. ಕೋಲಾರದಲ್ಲಿ ತಲ್ವಾರ್ ದ್ವಾರ ಹಾಕಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ ಮೌನ ವಹಿಸಿದ್ದು ಇಂತಹ ಗಲಾಟೆಗೆ ಕಾರಣವಾಗಿದೆ. ದೇಶದಲ್ಲಿ ಐಎನ್ಡಿಐಎ ಒಕ್ಕೂಟ ಹಾಗೂ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಳಿನ್ ಕುಮಾರ್ ವಿಶ್ಲೇಷಿಸಿದರು.
Stone pelting on Eid in Shivamogga, Nalin Kateel in Mangalore slams incident. The district administration of Karnataka’s Shivamogga imposed section 144 in Ragi Gudda area of the town on Monday after clashes took place between two communities on Sunday evening. A total of five people were reportedly injured in a stone-pelting incident at Ragi Gudda.
28-04-25 10:15 pm
HK News Desk
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
28-04-25 11:41 am
Mangalore Correspondent
Mangalore, Terror Attack, Doctor Post: ಹೈಲ್ಯಾ...
27-04-25 11:09 pm
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm