ಬ್ರೇಕಿಂಗ್ ನ್ಯೂಸ್
03-10-23 11:15 pm Mangaluru Correspondent ಕರಾವಳಿ
ಮಂಗಳೂರು, ಅ.3: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿಯಾಗಿದ್ದ 31ರ ಹರೆಯದ ವಿಜಾಪುರ ಮೂಲದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮನ ಗೌಡ ಚೌದರಿ (31) ಮೃತ ಪೊಲೀಸ್ ಸಿಬಂದಿ.
ಮಂಗಳೂರಿನ ವಯರ್ ಲೆಸ್ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಯ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಕಳೆದ ಏಳು ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಇನ್ಸ್ಪೆಕ್ಟರ್ ಅವರಿಗೆ ಡೆಂಗ್ಯೂ ಜ್ವರ ಬಾಧಿಸಿದ್ದರಿಂದ ಮಂಗಳವಾರ ಬೆಳಗ್ಗೆ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸೋಮನಗೌಡ ಅವರೇ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಿ ನಡೆದು ಹೊರ ಬರುತ್ತಿದ್ದಾಗಲೇ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸೋಮನಗೌಡ ಯಾವುದೇ ರೀತಿಯ ಕುಡಿತ, ಸಿಗರೇಟ್ ಚಟ ಹೊಂದಿರಲಿಲ್ಲ. ಬೆಳಗ್ಗೆ ಒಂದೂವರೆ ಗಂಟೆ ವಾಕಿಂಗ್, ಸಂಜೆ ದಿನವೂ ಶಟ್ಲ್ ಆಡಿಕೊಂಡು ತುಂಬ ಆರೋಗ್ಯ ಕಾಳಜಿ ಹೊಂದಿದ್ದರು. ಅಂಥ ಯುವಕನಿಗೆ ಈ ರೀತಿ ಹಾರ್ಟ್ ಅಟ್ಯಾಕ್ ಆಗೋದನ್ನು ನಂಬಲಾಗುತ್ತಿಲ್ಲ ಎಂದು ಅವರ ಜೊತೆಗಿದ್ದ ಸಿಬಂದಿ ಹೇಳುತ್ತಾರೆ. ಅಲ್ಲದೆ, ಸೋಮನ ಗೌಡ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಪತ್ನಿಯೂ ಮಂಗಳೂರಿನಲ್ಲೇ ಇದ್ದರು. ಕಳೆದ ಕೋವಿಡ್ ಸಂದರ್ಭದಲ್ಲಿ ತನ್ನ ಎರಡು ತಿಂಗಳ ವೇತನವನ್ನೇ ಕೋವಿಡ್ ಸಂತ್ರಸ್ತರಿಗೆ ನೀಡಿ ಉದಾರತೆ ಮೆರೆದಿದ್ದರು. ತುಂಬ ಒಳ್ಳೆಯ ನಡತೆ ಹೊಂದಿದ್ದರು ಎನ್ನುತ್ತಾರೆ, ಅಲ್ಲಿನ ಸಿಬಂದಿ. ವೈದ್ಯರು ಹೃದಯಾಘಾತ ಎಂದಿದ್ದು ಪೋಸ್ಟ್ ಮಾರ್ಟಮ್ ಬಳಿಕ ನಿಜ ವಿಚಾರ ತಿಳಿಯಬೇಕಷ್ಟೆ.
A head Police constable who was working with Mangalore City Armed Reserve (CAR) police died of heart attack on Tuesday at falnir, October 3. The CAR head constable Somanna Gowda Chaudhary is the deceased person.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm