ಬ್ರೇಕಿಂಗ್ ನ್ಯೂಸ್
10-11-20 08:39 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 10: ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶರತ್ ಮಡಿವಾಳ ಹತ್ಯೆಯಲ್ಲಿ ಪಾಲ್ಗೊಂಡವರು ಎಂಬಂತೆ ಬಿಂಬಿಸಿ ಪ್ರಚೋದನಕಾರಿ ಭಾಷಣ ಮಾಡಿರುವ ಹರಿಕೃಷ್ಣ ಬಂಟ್ವಾಳ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ನೇತೃತ್ವದಲ್ಲಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಬಂದು ಬಂಟ್ವಾಳ ನಗರ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತಿಯಲ್ಲಿ ಹರಿಕೃಷ್ಣ ಬಂಟ್ವಾಳ್ ಭಾಷಣ ಮಾಡುವಾಗ, ರೈ ಅವರನ್ನು ಕೊಲೆಗಾರರಂತೆ ಬಿಂಬಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ವಾಟ್ಸಾಪ್ ಮತ್ತು ಫೇಸ್ ಬುಕ್ ನಲ್ಲಿ ಹರಿದಾಡುತ್ತಿದ್ದು, ಇದರಿಂದ ರೈ ಘನತೆಗೆ ಧಕ್ಕೆ ಉಂಟಾಗಿದೆ. ಅಲ್ಲದೆ, ಪ್ರಾಣಭಯ ಎದುರಾಗಿದೆ. ಈಗಾಗಲೇ ಶರತ್ ಹತ್ಯೆ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿಕೊಂಡಿದ್ದು, ಪ್ರಕರಣ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ತನಿಖೆಯಲ್ಲಿದೆ. ಇಂಥ ಸಂದರ್ಭದಲ್ಲಿ ಈ ರೀತಿ ಆಪಾದನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಮನವಿ ಸಲ್ಲಿಕೆ ವೇಳೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಸಹಿತ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
The Bantwal and Pane Mangaluru Block Congress members and leaders have filed a complaint against Keonics Chairman Harikrishna Bantwal for deformation statement made against Former Minister Ramanath Rai.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm