ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm