ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm