ಬ್ರೇಕಿಂಗ್ ನ್ಯೂಸ್
14-10-23 01:29 pm Udupi Correspondent ಕರಾವಳಿ
ಕಾರ್ಕಳ, ಅ.14: ಭಾರೀ ವಿವಾದಕ್ಕೆ ಈಡಾಗಿರುವ ಬೈಲೂರು ಸಮೀಪದ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಮೂರ್ತಿ ದಿಢೀರ್ ‘ಮಾಯ’ವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ತೀವ್ರ ಪರ- ವಿರೋಧ ಚರ್ಚೆಗೆ ಕಾರಣವಾಗಿದ್ದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು 2023ರ ಜ.27ರಂದು ಪ್ರತಿಷ್ಠಾಪಿಸ ಲಾಗಿತ್ತು. ತರಾತುರಿಯಲ್ಲಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಥೀಮ್ ಪಾರ್ಕ್ ಲೋಕಾರ್ಪಣೆ ಮಾಡಿದ್ದರು. ಇತ್ತೀಚೆಗೆ ಮೂರ್ತಿಯ ಅಸಲೀತನದ ಬಗ್ಗೆ ಆರೋಪ, ಪ್ರತಿಭಟನೆ ನಡೆದಿತ್ತು. ನಂತರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿತ ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದರು. ಅವರು ಇಲ್ಲಿರುವ ಮೂರ್ತಿ ಅರ್ಧ ನಕಲಿ ಎಂಬುದನ್ನು ಪತ್ರಕರ್ತರೆದುರು ಹೇಳಿಕೊಂಡಿದ್ದು ಭಾರೀ ಸಂಚಲನ ಮೂಡಿಸಿತ್ತು.
ಈ ನಡುವೆ ಪಾರ್ಕ್ನಲ್ಲಿ ಬಾಕಿ ಉಳಿದ ಕಾಮಗಾರಿಯಲ್ಲಿ ಪರಶುರಾಮ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕವನ್ನು ಅಳವಡಿಸುವ ಹಾಗೂ ಮೂರ್ತಿಗೆ ತುಕ್ಕು ನಿರೋಧಕ ಲೇಪನದ ಮತ್ತು ಇತರ ಮುಕ್ತಾಯದ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ನವೆಂಬರ್ ತಿಂಗಳ ಕೊನೆಯ ವರೆಗೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿತ್ತು.
ಆದೇಶದ ಬಳಿಕ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ಬಳಿ ಯಾರೊಬ್ಬರಿಗೂ ತೆರಳಲು ಪೊಲೀಸರು ಹಾಗೂ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಇದುವರೆಗೆ ಬೈಲೂರಿನಿಂದ ಕಾರ್ಕಳ ಕಡೆಗೆ ತೆರಳುವಾಗ ಸ್ಪಷ್ಟವಾಗಿ ಕಾಣುತ್ತಿದ್ದ ಪರಶುರಾಮ ಮೂರ್ತಿಯನ್ನು ಈಗ ಕಪ್ಪು ಪ್ಲಾಸ್ಟಿಕ್ ಶೀಟುಗಳಿಂದ ಮುಚ್ಚಿದ್ದು ಸಾರ್ವಜನಿಕರಿಂದ ಮರೆ ಮಾಚಲಾಗಿದೆ.
ಇದೀಗ ಗುರುವಾರ ರಾತ್ರಿ ದಿಢೀರ್ ಆಗಿ ಮೂರ್ತಿಯನ್ನು ‘ನಾಪತ್ತೆ’ ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಬೆಟ್ಟದ ಬುಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಕಾರ್ಕಳ ಪುರಸಭಾ ಸದಸ್ಯ ಶುಭದ ರಾವ್, ನಿನ್ನೆ ನಾವು ಇದೇ ಜಾಗದಲ್ಲಿ ನಿಂತು ಮಾಡಿದ ವಿಡಿಯೋದಲ್ಲಿ ಪರಶುರಾಮನ ಕೊಡಲಿ ಹಾಗೂ ಬಿಲ್ಲು ಕಾಣುತ್ತಿತ್ತು. ಆದರೆ ಇಂದು ಇದೇ ಜಾಗದಲ್ಲಿ ನಿಂತು ನೋಡಿದರೆ ಎರಡೂ ಕಾಣಿಸುತ್ತಿಲ್ಲ. ಅಂದರೆ ನಿನ್ನೆ ರಾತ್ರಿಯೇ ನಕಲಿ ಮೂರ್ತಿಯನ್ನು ಅಲ್ಲಿಂದ ತೆರವು ಮಾಡಲಾಗಿದೆ ಎಂದರು.
Parashuram statue goes missing from theme park in Karkala.The work on strengthening the Parashurama statue at the Parashurama Theme Park in Bailoor, Karkala taluk, has come to an abrupt halt after people protested against the work during the beginning of this week.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm