ಬ್ರೇಕಿಂಗ್ ನ್ಯೂಸ್
18-10-23 02:39 pm Mangalore Correspondent ಕರಾವಳಿ
ಮಂಗಳೂರು, ಅ.18: ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಗಳೂರಿನ ಬೋಂದೆಲ್ ನಲ್ಲಿರುವ ಪಿಡಬ್ಲ್ಯುಡಿ ಇಲಾಖೆಯ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಗುಣಮಟ್ಟ ಭರವಸೆ ವಿಭಾಗದ ಸಹಾಯಕ ಇಂಜಿನಿಯರ್ ರೊನಾಲ್ಡ್ ಲೋಬೋ ಅವರನ್ನು ಬಂಧಿಸಿದ್ದಾರೆ. 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಯ ಎಎನ್ಎಂ ರಸ್ತೆ ಕಾಮಗಾರಿ (25 ಲಕ್ಷ) ಹಾಗೂ ಕರಿಮಣೇಲು ಗ್ರಾಮದ ಕೈರೋಳಿ ಎಂಬಲ್ಲಿನ ಪರಿಶಿಷ್ಟ ಜಾತಿ ಕಾಲನಿಯ ರಸ್ತೆ ಕಾಮಗಾರಿ (20 ಲಕ್ಷ) ನಡೆದು, ಬಿಲ್ ಪಾವತಿಯಾಗುವುದಕ್ಕೆ ಮೊದಲು ಕ್ವಾಲಿಟಿ ಚೆಕ್ಕಿಂಗ್ ರಿಪೋರ್ಟ್ ಕೊಡಬೇಕಾಗಿತ್ತು. ಗುತ್ತಿಗೆ ಕಾಮಗಾರಿ ನಿರ್ವಹಿಸಿದ್ದ ಪ್ರಭಾಕರ ನಾಯ್ಕ್ ಕ್ವಾಲಿಟಿ ಚೆಕ್ಕಿಂಗ್ ವರದಿ ಪಡೆಯಲೆಂದು ಮಂಗಳೂರಿನ ಎಇ ರೊನಾಲ್ಡ್ ಲೋಬೋ ಅವರಲ್ಲಿ ಬಂದಾಗ, 22 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಗಮನಕ್ಕೆ ತಂದಿದ್ದು ಅಧಿಕಾರಿಗಳ ಸೂಚನೆಯಂತೆ ಟ್ರಾಪ್ ಮಾಡಿದ್ದಾರೆ. 20 ಸಾವಿರ ರೂ. ಹಣ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
Lokayukta Raid on PWD assistant engineer office in Mangalore, two including Ronald Lobo arrested by officers.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 04:52 pm
HK Staffer
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm