ಬ್ರೇಕಿಂಗ್ ನ್ಯೂಸ್
29-10-23 06:00 pm Mangalore Correspondent ಕರಾವಳಿ
ಮಂಗಳೂರು, ಅ.29: ಕೇರಳದಲ್ಲಿ ಬಾಂಬ್ ಸ್ಫೋಟ ಕೃತ್ಯ ನಡೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಎಲರ್ಟ್ ಇರಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಮಂಗಳೂರು ಪ್ರವಾಸದಲ್ಲಿರುವ ಪರಮೇಶ್ವರ್ ಬಳಿ ಈ ಬಗ್ಗೆ ಕೇಳಿದಾಗ, ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಯಾರು ಆ ಕೃತ್ಯ ನಡೆಸಿದ್ದಾರೆ ಗೊತ್ತಿಲ್ಲ. ಘಟನೆ ಹಿನ್ನೆಲೆಯಲ್ಲಿ ಕೇರಳದ ಗಡಿಯನ್ನು ಹೊಂದಿಕೊಂಡ ಭಾಗದಲ್ಲಿ ನಿಗಾ ಹೆಚ್ಚಿಸಲಾಗುವುದು ಎಂದಿದ್ದಾರೆ.
ದಸರಾ ಸಂದರ್ಭದಲ್ಲಿ ಮೈಸೂರು, ಮಡಿಕೇರಿ, ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ದಸರಾ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದರಿಂದ ಗಮನ ಹರಿಸಲು ಪೊಲೀಸರಿಗೆ ಸೂಚನೆ ನೀಡಲಾಗಿತ್ತು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು. ಸೈಬರ್ ಕ್ರೈಮ್ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಸೈಬರ್ ಅಪರಾಧ ಪತ್ತೆಗಾಗಿ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸುತ್ತಿದ್ದೇವೆ. ಅದನ್ನು ನ್ಯಾಶನಲ್, ಇಂಟರ್ನ್ಯಾಷನಲ್ ಲೆವೆಲಲ್ಲಿ ಒಯ್ಯಬೇಕಿದೆ. ಅದಕ್ಕಾಗಿ ಕ್ರಮ ವಹಿಸುತ್ತಿದ್ದೇವೆ ಎಂದರು.
ಪಿಎಸ್ಐ ಹಗರಣ ಬಳಿಕ ಪೊಲೀಸ್ ನೇಮಕಾತಿ ಆಗುತ್ತಿಲ್ಲ ಎಂಬ ಪ್ರಶ್ನೆಗೆ, ಸರ್ಕಾರದ ಅಭಿಪ್ರಾಯ ಕೋರ್ಟಿಗೆ ತಿಳಿಸಿದ್ದೇವೆ. ಪರೀಕ್ಷೆ ಇನ್ನಿತರ ಪ್ರಕ್ರಿಯೆಗಳನ್ನು ನಡೆಸಲು ಅವಕಾಶ ನೀಡಬೇಕೆಂಬ ಬಗ್ಗೆ ಹೇಳಿದ್ದೇವೆ ಎಂದರು.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ಎಸ್ಪಿ ಲೆವೆಲಲ್ಲೇ ತನಿಖೆ ಮಾಡುತ್ತೇವೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ತನಿಖೆ ಮಾಡುತ್ತಾರೆ. ಹೆಚ್ಚುವರಿ ತನಿಖೆ ಬೇಕಿದ್ದರೆ ನೋಡುತ್ತೇವೆ ಎಂದರು.
Bomb blast in Kerala, Home Minister Parameshwara orders police to be on high alert in Mangalore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm