ಬ್ರೇಕಿಂಗ್ ನ್ಯೂಸ್
10-11-23 01:35 pm Udupi Correspondent ಕರಾವಳಿ
ಉಡುಪಿ, ನ.10: ಈಟಿವಿ ಕನ್ನಡ, ದೂರದರ್ಶನ ಟಿವಿಯಲ್ಲಿ ಜಿಲ್ಲಾ ವರದಿಗಾರರಾಗಿದ್ದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಗುರವಾರ ಬೆಳಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಶಿಧರ್ ಹೆಮ್ಮಣ್ಣ ಅವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. 1991ರಲ್ಲಿ ಕುಂದಪ್ರಭ ಪತ್ರಿಕೆ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್, "ಕ್ಷಿತಿಜ" ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು. ಬಳಿಕ ಈ ಟಿವಿ ಕನ್ನಡ, ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಅವರು ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು, ಸರಕಾರದ ಗಮನ ಸೆಳೆದಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿದ್ದರು. ಪರಿಸರ ಪ್ರೇಮಿಯೂ ಆಗಿದ್ದ ಅವರು, ಕರಾವಳಿಯಲ್ಲಿ ಕಾಂಡ್ಲಾ ವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನೆಲ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ 'ನೀರು ಆರುವ ಮುನ್ನ' ಕಾರ್ಯಕ್ರಮದಲ್ಲಿ ಮೂಂಚಣಿಯಲ್ಲಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ನಾಲ್ಕು ಜನ ಸಹೋದರರು, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Senior journalist Shashidhar Hemmanna (57), who was a district reporter with ETV Kannada and Doordarshan TV, passed away here on Monday following a cardiac arrest.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm