ಬ್ರೇಕಿಂಗ್ ನ್ಯೂಸ್
16-11-23 10:37 am Mangalore Correspondent ಕರಾವಳಿ
ಮಂಗಳೂರು, ನ.16: ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ, ಬಿಕೆ ಹರಿಪ್ರಸಾದ್ ಅವರಿಗೆ ಎದುರಾಗಿ ಬೆಂಗಳೂರಿನಲ್ಲಿ ಡಿ.10ರಂದು ಆಯೋಜಿಸಿರುವ ಈಡಿಗರ ಸಮಾವೇಶಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಲ್ಲವ ಮುಖಂಡರನ್ನು ಒಟ್ಟುಗೂಡಿಸುವ ಪ್ರಕ್ರಿಯೆ ನಡೆದಿದೆ. ಅದರ ಮೊದಲ ಪ್ರಯತ್ನವಾಗಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಮುಖಂಡರು ಸಭೆ ಸೇರಿ ಶಕ್ತಿ ಪ್ರದರ್ಶನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ, ಬಿಲ್ಲವ ಸಮುದಾಯದ ಬಿ.ಕೆ.ಹರಿಪ್ರಸಾದ್ ಅವರ ವಿರುದ್ಧ ಶಕ್ತಿ ಪ್ರದರ್ಶನಕ್ಕಾಗಿ ಬೆಂಗಳೂರಿನ ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ಉಸ್ತುವಾರಿಯಲ್ಲಿ ಆಯೋಜಿಸುತ್ತಿರುವ ಈಡಿಗ ಸಮಾವೇಶದಲ್ಲಿ ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಬಿಲ್ಲವರು ಕರಾವಳಿಯಿಂದ ಭಾಗವಹಿಸಲು ಮಂಗಳೂರಿನಲ್ಲಿ ನಡೆದ ಸಿದ್ದತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪ್ರಖರ ಹಿಂದುತ್ವವಾದಿ ಸತ್ಯಜಿತ್ ಸುರತ್ಕಲ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ನ.12ರಂದು ಭಾನುವಾರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಪೂರ್ವ ಸಿದ್ದತಾ ಸಭೆ ಆಯೋಜಿಸಲಾಗಿತ್ತು. ಆರ್ಯ ಈಡಿಗ ಮಹಾಸಂಸ್ಥಾನ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಿದ್ಧತಾ ಸಭೆ ನಡೆಸಿದ್ದು ಬಹುತೇಕ ಭಾಗದ ಬಿಲ್ಲವ ಮುಖಂಡರು ಭಾಗವಹಿಸಿದ್ದರು. ಕೆಲವು ಮಂದಿ ಮಾಜಿ ಸಚಿವ ರಮಾನಾಥ ರೈ ಬಣದೊಂದಿಗೆ ಗುರುತಿಸಿಕೊಂಡಿರುವ ಬಿಲ್ಲವರನ್ನು ಹೊರತುಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡವರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಟಿವ ಸಂಪುಟದಿಂದ ವಿನಯ ಕುಮಾರ್ ಸೊರಕೆ ಅವರನ್ನು ಕಿತ್ತು ಹಾಕಿದಾಗ ಒಂದು ಸಣ್ಣ ಮಟ್ಟಿನ ವಿರೋಧವನ್ನಾಗಲಿ, ಖಂಡನಾ ಸಭೆಯನ್ನಾಗಲಿ ನಡೆಸದ ಈ ಬಿಲ್ಲವ ಮುಖಂಡರು ಈಗ ಅದೇ ಸಿದ್ದರಾಮಯ್ಯ ಪರವಾಗಿ ಮತ್ತು ಬಿ.ಕೆ.ಹರಿಪ್ರಸಾದ್ ವಿರುದ್ಧವಾಗಿ ನಡೆಯುವ ಸಮಾವೇಶಕ್ಕೆ ಲಕ್ಷಾಂತರ ಮಂದಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಶೇಷ ಬಸ್ಸುಗಳ ಮೂಲಕ ಕರೆದೊಯ್ದು ಸಮಾವೇಶವನ್ನು ಯಶಸ್ವಿಗೊಳಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಲ್ಲವ ಮುಖಂಡರು ಪಕ್ಷ ಭೇದ ಮರೆತು ಬೆಂಬಲಕ್ಕೆ ನಿಂತಿದ್ದು ಸ್ವತಃ ಈ ಭಾಗದವರೇ ಆಗಿರುವ ಬಿಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.
ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುತುವರ್ಜಿಯಲ್ಲಿ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮ ಘೋಷಣೆ ಮಾಡಲಾಗಿತ್ತು. ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕುರುಬ, ಕ್ರೈಸ್ತ, ಅಲ್ಪಸಂಖ್ಯಾತ ಸೇರಿದಂತೆ ಕೆಲವು ನಿಗಮಗಳಿಗೆ ಅನುದಾನ ಘೋಷಣೆ ಮಾಡಿ ಆಡಳಿತ ಮಂಡಳಿಯನ್ನು ನೇಮಕ ಮಾಡಲಾಗಿದೆ. ಆದರೆ, ಈಡಿಗ, ಬಿಲ್ಲವ ಸಮುದಾದ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಲಾಗಿಲ್ಲ. ಅನುದಾನವನ್ನೂ ನೀಡದೆ ಬಿಲ್ಲವರನ್ನು ಕಡೆಗಣಿಸಲಾಗಿದೆ. ಈ ಬಗ್ಗೆ ಬಿಜೆಪಿ ಪರ ಒಲವುಳ್ಳ ಬಿಲ್ಲವ ಮುಖಂಡರು ಕೂಡ ಮಾತನಾಡದಿರುವುದು ಅಚ್ಚರಿ ಮೂಡಿಸಿದೆ.
ಸಭೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಸಾಯಿರಾಂ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ, ಶ್ರೀ ನಾರಾಯಣ ಗುರು ಯುವ ವೇದಿಕೆಯ ಎಂ.ಎಸ್ ಕೋಟ್ಯಾನ್, ಮೂರ್ತೆದಾರ ಸಂಘದ ಅಧ್ಯಕ್ಷರಾದ ಬಿರ್ವ ಸಂಜೀವ ಪೂಜಾರಿ, ಆತ್ಮಶಕ್ತಿ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್, ತೀಯ ಸಮಾಜದ ದಿನೇಶ್ ಕುಂಪಲ,ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಎಂ ಶೇಖರ್ ಪೂಜಾರಿ, ಬೆಳ್ತಂಗಡಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ, ಮಾಜಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ಬಿಲ್ಲವ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಗಂಗಾಧರ ಚೆಳೈರ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ ಅಧ್ಯಕ್ಷ ಸದಾನಂದ ಪೂಜಾರಿ, ಕಂಕನಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ದಿನೇಶ್ ಅಂಚನ್, ಉರ್ವ ಬಿಲ್ಲವ ಸಂಘದ ಅಧ್ಯಕ್ಷರಾದ ಹರಿಪ್ರಸಾದ್, ಯಶವಂತ್ ದೇರಾಜೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ರವೀಂದ್ರ ಬಂಗೇರ ಕೊಣಾಜೆ, ಮಾಜಿ ಕಾರ್ಪೊರೇಟರ್ ಗಳಾದ ದೀಪಕ್ ಪೂಜಾರಿ, ರಾಧಾಕೃಷ್ಣ , ವಿವಿಧ ಬಿಲ್ಲವ ಸಂಘಗಳು, ಯುವ ಸಂಘಟನೆ ಮತ್ತು ಅದರ ಘಟಕಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Billava leaders from Dakshina Kannada and Udupi districts are in the process of bringing together the Edigara sammelan to be held in Bengaluru on December 10 in front of Chief Minister Siddaramaiah and B K Hariprasad.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm