ಬ್ರೇಕಿಂಗ್ ನ್ಯೂಸ್
23-11-23 06:15 pm Mangalore Correspondent ಕರಾವಳಿ
ಮಂಗಳೂರು, ನ.23: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರಕಾರವು ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಅಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆಯೇ ಜಿಲಾಧಿಕಾರಿಯವರ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢ ಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಈ ಮೂಲಕ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ರಾಜ್ಯ ಸರಕಾರ ಕಡೆಗಣಿಸುತ್ತಿದೆ. ಇದು ರಾಜ್ಯ ಸರಕಾರದ ಖಂಡನೀಯ ನಡೆಯಾಗಿದೆ. ಇದರಿಂದ ಪದವಿ ಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಅದು ಎಲ್ಲರನ್ನೂ ಒಳ್ಳಗೊಂಡು ಸರ್ವ ಸಮ್ಮತದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಅದನ್ನು ಒಳಗೊಳ್ಳುವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಈ ಬಗ್ಗೆ ತೆಗೆದುಕೊಂಡ ಎಲ್ಲಾ ಪ್ರಕ್ರಿಯಗಳನ್ನು ನಿಲ್ಲಿಸಿ ತಕ್ಷಣವೇ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಪ್ರತಿನಿಧಿಗಳು, ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಯನ್ನು ಕರೆದು ಚರ್ಚಿಸಿ ಒಮ್ಮತದಿಂದ ತೀರ್ಮಾನಿಸಲು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
Mangalore University Former syndicate member S R Harish Acharya requests for post graduation education department to be under GIP.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm