ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am