ಬ್ರೇಕಿಂಗ್ ನ್ಯೂಸ್
17-11-20 03:59 pm Mangaluru Correspondent ಕರಾವಳಿ
ಮಂಗಳೂರು, ನ.17: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಕೇಂದ್ರ ಸರಕಾರ, ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಎಂದು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ- ಚೆನ್ನಯರ ಹೆಸರಿಡಬೇಕು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದರೂ ಅದರ ಹೆಸರು ಬದಲಾವಣೆ ಮಾಡಿಲ್ಲ. ಅದೇ ರೀತಿ ಗುಜರಾತ್, ಮುಂಬಯಿ ವಿಮಾನ ನಿಲ್ದಾಣಗಳನ್ನು ಖಾಸಗಿ ನಿರ್ವಹಣೆಗೆ ಗುತ್ತಿಗೆ ನೀಡಿದ್ದರೂ, ಹೆಸರು ಬದಲಾಗಿಲ್ಲ. ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನೇ ಅದಾನಿಗೆ ಒಪ್ಪಿಸಿದ್ದು ಏಕೆ ? ಈ ಬಗ್ಗೆ ಇಲ್ಲಿನ ಸಂಸದರು ಬಾಯಿ ತೆರೆದು ಸೂಕ್ತ ಹೆಸರಿಡಲು ಶಿಫಾರಸು ಮಾಡಬೇಕು ಎಂದು ಹೇಳಿದರು.
ಅದಾನಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಆಗ್ರಹಿಸಿ ಈಗಾಗಲೇ ಕಾಂಗ್ರೆಸ್ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದೆ. ನ.18ರಂದು ಸಂಜೆ ನಗರದ ಸರ್ಕ್ಯೂಟ್ ಹೌಸ್ನಿಂದ ವಿಮಾನ ನಿಲ್ದಾಣದ ವರೆಗೆ ಪಂಜಿನ ಮೆರವಣಿಗೆಯೊಂದಿಗೆ ಪ್ರತಿಭಟನಾ ಪ್ರದರ್ಶನ ನಡೆಸಲಾಗುವುದು. ಇದಕ್ಕೆ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದರು.
ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವುಗೊಳಿಸಿ, ಈ ನಾಡಿನ ಅಸ್ಮಿತೆಯ ಪ್ರತೀಕವಾಗಿರುವ ಈ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆಯನ್ನು ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾಗಿ ದ.ಕ. ಜಿಲ್ಲೆಗೆ ಲಭಿಸಿರುವ ವಿಮಾನ ನಿಲ್ದಾಣಕ್ಕೆ ಯಾವ ಕೊಡುಗೆಯನ್ನು ನೀಡದ ಅದಾನಿಯ ಹೆಸರನ್ನು ಇಟ್ಟಿರುವುದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅಪಮಾನ. ಅಲ್ಲದೆ ನಾಚಿಗೇಡಿನ ಸಂಗತಿ. ತುಳುನಾಡಿನ ಇತಿಹಾಸವನ್ನು ಮರೆಸುವ ಕೆಲಸ ಮಾಡಲಾಗುತ್ತಿದೆ. ಇತಿಹಾಸ ಪುರುಷರ ಹೆಸರಿಡಬೇಕಲ್ಲದೆ ಕಂಪನಿ ಧಣಿಯ ಹೆಸರಿಡುವುದು ಎಷ್ಟು ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್, ವಸಂತ್ ಬೆರ್ನಾರ್ಡ್, ಪಿಯೂಸ್ ಮೊದಲಾದವರು ಉಪಸ್ಥಿತರಿದ್ದರು.
District Youth Congress and Mulky-Moodbidiri Block Congress are set to hold torch light protest rally from Circuit House to Bajpe airport on Wednesday November 18 condemning the privatisation of Mangaluru International Airport (MIA).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am