ಬ್ರೇಕಿಂಗ್ ನ್ಯೂಸ್
18-11-20 11:23 pm Mangaluru Correspondent ಕರಾವಳಿ
ಮಂಗಳೂರು, ನ.18: ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕೆಂದು ಒತ್ತಾಯಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮೂಡುಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.
ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ನಲ್ಲಿ ಉದ್ಘಾಟನೆ ಕಾರ್ಯಕ್ರಮ ಮೂಲಕ ಆರಂಭಿಸಿ, ಬಳಿಕ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ನಡೆದುಕೊಂಡೇ ಕೆಂಜಾರಿನತ್ತ ತೆರಳಿದರು. ರಾತ್ರಿ 9.30ರ ಸುಮಾರಿಗೆ ವಿಮಾನ ನಿಲ್ದಾಣ ಇರುವ ಕೆಂಜಾರಿಗೆ ತೆರಳಿ, ಪ್ರತಿಭಟನಾ ಧರಣಿ ನಡೆಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬಿಜೆಪಿ ಸರಕಾರ ಮತ್ತು ಮಂಗಳೂರಿನ ಸಂಸದರ ವಿರುದ್ಧ ಘೋಷಣೆ ಕೂಗಿಕೊಂಡು ಕಾರ್ಯಕರ್ತರು ಸಾಗಿದರು.
ಇದಕ್ಕೂ ಮುನ್ನ ಉದ್ಘಾಟನೆ ವೇಳೆ ಮಾತನಾಡಿದ ಮಿಥುನ್ ರೈ, ಮಂಗಳೂರು ಸಂಸದ ನಳಿನ್ ಕುಮಾರ್ ಇಚ್ಛಾಶಕ್ತಿ ತೋರಿದ್ದರೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ಗೆ ಹಸ್ತಾಂತರ ಮಾಡದಂತೆ ತಡೆ ಹಿಡಿಯಬಹುದಾಗಿತ್ತು. ಜಿಲ್ಲೆಯ ಜನತೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕಿದ್ದ ಸಂಸದರು ಮೌನ ತಾಳಿದ್ದಾರೆ. ಈಗ ಅದಾನಿ ಗುತ್ತಿಗೆ ಪಡೆದು ತನ್ನದೇ ಹೆಸರನ್ನು ನಿಲ್ದಾಣಕ್ಕೆ ಇಟ್ಟಿದ್ದಾರೆ. ವಿಮಾನ ನಿಲ್ದಾಣಕ್ಕೆ ತುಳುನಾಡಿನ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಹೆಸರು ನಾಮಕರಣ ಮಾಡಬೇಕೆಂದು ನಿರಂತರ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಜನಸಾಮಾನ್ಯರನ್ನು ಕಡೆಗಣಿಸಿ ಬಂಡವಾಳಶಾಹಿಗಳ ಪರ ಕೆಲಸ ಮಾಡುತ್ತಿದೆ. ವಿಮಾನ ನಿಲ್ದಾಣದ ಹೆಸರನ್ನು ಕಿತ್ತು ಹಾಕುವವರೆಗೆ ಹೋರಾಟ ನಿಲ್ಲದು ಎಂದುರು.
ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸೇವಾದಳದ ಜಿಲ್ಲಾಧ್ಯಕ್ಷ ಸುರೇಶ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
Video:
District Youth Congress and Mulky-Moodbidiri Block Congress held a torchlight protest rally from Circuit House to Bajpe airport on Wednesday, November 18 demanding to rename the Mangaluru International Airport along with condemning privatization of the airport.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm