ಬ್ರೇಕಿಂಗ್ ನ್ಯೂಸ್
27-12-23 09:26 pm Mangalore Correspondent ಕರಾವಳಿ
ಪುತ್ತೂರು, ಡಿ.27: ಒಕ್ಕಲಿಗ ಸಮಾಜದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದೇ ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಕಡಬದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಪಕ್ಷದ ನಾಯಕರ ವಿರುದ್ಧ ತನ್ನ ಅಸಮಾಧಾನ ಹೊರಹಾಕಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಹಾಗೂ ನಾನು ಸೇರಿಕೊಂಡು ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಯವರ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಅಲ್ಲಿ ನಾನು ಒಕ್ಕಲಿಗ ಸಮಾಜದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯ ಮಂತ್ರಿಯಾಗಿದ್ದೇನೆ ಎಂದು ಹೇಳಿದ್ದು ನನ್ನ ಸ್ಥಾನಕ್ಕೆ ಮುಳುವಾಯಿತು ಎಂದರು.
ಅಷ್ಟಕ್ಕೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ನನಗೆ ಸೂಚನೆ ನೀಡಲಾಗಿತ್ತು ಎಂದು ಹೇಳಿದ ಸದಾನಂದ ಗೌಡ, ನಾನು ಚುನಾವಣೆ ರಾಜಕೀಯದಿಂದ ನಿವೃತ್ತನಾಗಿದ್ದು, ಇನ್ನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಆದ್ದರಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯನಾಗಿರುತ್ತೇನೆ ಎಂದರು.
ಇಂದು ಪ್ರಾಮಾಣಿಕ ರಾಜಕಾರಣಕ್ಕೆ ಬೆಲೆ ಇಲ್ಲ. ಹರಕು ನಾಲಗೆ, ಚೀಲ ತುಂಬಾ ದುಡ್ಡು ಮತ್ತು ಗುಂಪುಗಾರಿಕೆಯಿಂದಲೇ ರಾಜಕೀಯ ನಡೆಯುತ್ತಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ರಾಜಕಾರಣ ಬೇಕೇ ಬೇಕು. ಉಳಿದ ಪಕ್ಷಗಳಿಗಿಂತ ನನ್ನ ಪಕ್ಷ ಒಳ್ಳೆಯದು ಎನ್ನುವ ನೆಲೆಯಲ್ಲಿ ಪಕ್ಷದ ಕೆಲಸ ಮಾಡುತ್ತೇನೆ ಎಂದರು.
I Was Made To Resign From The Cm Post Soon After My Talk At Vokkaliga Community Function Reveals Dv Sadananda Gowda
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm