ಬ್ರೇಕಿಂಗ್ ನ್ಯೂಸ್
13-01-24 10:16 pm Mangalore Correspondent ಕರಾವಳಿ
ಉಳ್ಳಾಲ, ಜ.13: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ.
ಉಳ್ಳಾಲ ತಾಲೂಕಿನ ನರಿಂಗಾನದ ಲವ- ಕುಶ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನದ ಮೋರ್ಲ ಬೋಳದಲ್ಲಿ ನಡೆದ ದ್ವಿತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ `ನರಿಂಗಾನ ಕಂಬಳೋತ್ಸ'ವದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಿದಾಗ ಕ್ರೀಡಾ ಇಲಾಖೆ ಒಂದು ಕೋಟಿಯನ್ನು ಕೊಟ್ಟಿದೆ. ಕರಾವಳಿಯಲ್ಲಿ ನಡೆಯುವ ಕಂಬಳಕ್ಕೂ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ ಎಲ್ಲಾ ಜಾತಿ, ಧರ್ಮದವರು ಸೇರಿ ಮಾಡುವ ಸಾರ್ವಜನಿಕ ಕಂಬಳವಾಗಿದ್ದು, ಇದು ಸೌಹಾರ್ದತೆ ಪ್ರತೀಕವಾಗಿದೆ ಎಂದರು. ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಕ್ರೀಡಾ ಕಮಿಷನರ್ ಶಶಿಕುಮಾರ್, ಕಣಚೂರು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಯು.ಕಣಚೂರು ಮೋನು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮಂಜನಾಡಿ ದರ್ಗಾ ಅಧ್ಯಕ್ಷ ಅಬ್ದುಲ್ ಅಜೀಝ್ ಮೈಸೂರು ಬಾವ, ದ.ಕ.ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ, ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು, ರಕ್ಷಿತ್ ಶಿವರಾಮ್, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕಟಪಾಡಿ ಕಂಬಳದ ರೋಹಿತ್ ಹೆಗ್ಡೆ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಜೀರು ಕೇದಗೆಬೈಲ್ನಲ್ಲಿ ಲವ - ಕುಶ ಕಂಬಳವನ್ನು 25 ವರ್ಷಗಳ ಕಾಲ ಮುನ್ನಡೆಸಿದ ಮಿತ್ತಕೋಡಿ ವೆಂಕಪ್ಪ ಕಾಜವ ಮತ್ತು ಉಮೇಶ್ ಮಹಾಬಲ ಶೆಟ್ಟಿ ಮಾಣಿಸಾಗು ಅವರನ್ನು ಗೌರವಿಸಲಾಯಿತು.
ಶನಿವಾರ ಬೆಳಗ್ಗೆ ವರ್ಕಾಡಿ ಹೊಸಮನೆ ರಾಜೇಶ್ ತಾಳಿತ್ತಾಯರು ಮತ್ತು ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು.
The state government and the state sports department are committed to promote sports including Kambala and the department will take steps to construct a playground at Naringana, including release of funds for Kambala, youth and sports minister said B Nagendra
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm