ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm