ಬ್ರೇಕಿಂಗ್ ನ್ಯೂಸ್
18-01-24 02:58 pm Mangalore Correspondent ಕರಾವಳಿ
ಮಂಗಳೂರು, ಜ.18: ಅಪೂರ್ಣ ರಾಮಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡುವುದೇ ಹಿಂದು ಧರ್ಮಶಾಸ್ತ್ರಕ್ಕೆ ಅಪಚಾರ. ಅದರಲ್ಲೂ ರಾಮ ಜನ್ಮಭೂಮಿಗಾಗಿ ಮೊದಲು ದಾವೆ ಹೂಡಿದ್ದ ಹಿಂದು ಮಹಾಸಭಾ ಮತ್ತು ನಿರ್ಮೋಹಿ ಅಖಾಡವನ್ನು ಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೂರ ಇಟ್ಟಿದ್ದಾರೆ. ಬಿಜೆಪಿಯಲ್ಲಿದ್ದವರನ್ನೇ ಮುಂದಿಟ್ಟು ಟ್ರಸ್ಟ್ ಮಾಡಿಕೊಂಡಿದ್ದಾರೆ ಎಂದು ಹಿಂದು ಮಹಾಸಭಾ ಕರ್ನಾಟಕ ಇದರ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಮನ ಮಂದಿರವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಅಪೂರ್ಣ ಮಂದಿರದಲ್ಲಿ ರಾಮನ ಪ್ರತಿಷ್ಠೆ ಮಾಡಲು ಹೊರಟಿದ್ದು ನೋಡಿದರೆ ಇವರಿಗೆ ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಭಯ ಇದೆಯೇ ಎನ್ನುವ ಶಂಕೆ ಬರುತ್ತಿದೆ. ಹಿಂದು ಸಮಾಜವನ್ನು ಪ್ರತಿನಿಧಿಸುತ್ತೇವೆಂದು ಹೇಳಿ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರೇ ಆಗಿರುವ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ, ರಾಮ ಸೇತುವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಿ ಎಂದು ಪ್ರಧಾನಿ ಮೋದಿ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ. ಇವರಿಗೆ ನೈತಿಕತೆ ಇರುತ್ತಿದ್ದರೆ ರಾಮ ಸೇತು ಘೋಷಣೆ ಮಾಡಬಹುದಿತ್ತು. ಅದರಲ್ಲಿ ಲಾಭವನ್ನಷ್ಟೇ ನೋಡುತ್ತಿದ್ದಾರೆ. ರಾಮನ ಬಗ್ಗೆ ನಿಷ್ಠೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಭಗವಾನ್ ರಾಮನನ್ನು ಚುನಾವಣಾ ಸರಕನ್ನಾಗಿ ಮಾಡಿಕೊಂಡಿರುವ ಬಿಜೆಪಿಗೆ ರಾಮನ ಶಾಪ ತಟ್ಟಲಿದೆ ಎಂದು ಹೇಳಿದ ರಾಜೇಶ್ ಪವಿತ್ರನ್, ಜನವರಿ 22ರಂದು ಸರಕಾರದ ನೇತೃತ್ವದಲ್ಲೇ ರಾಮನ ಪ್ರತಿಷ್ಠೆ ಆಗುತ್ತಿದ್ದು ನಾವದನ್ನು ಅನಿವಾರ್ಯ ಎಂಬಂತೆ ಸಂಭ್ರಮಿಸುತ್ತೇವೆ. ಅದರ ಅಂಗವಾಗಿ ಜನವರಿ 22ರಂದು ಬೆಳಗ್ಗೆ ರಾಮನ ಮಂದಿರಕ್ಕಾಗಿ ಶ್ರಮಿಸಿದ ಕರಸೇವಕರನ್ನು ಗೌರವಿಸಿ ಸನ್ಮಾನಿಸಲಿದ್ದೇವೆ. ನಗರದ ಪಿವಿಎಸ್ ವೃತ್ತದ ಬಳಿಯ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ಎಲ್.ಕೆ.ಸುವರ್ಣ, ಕೃಷ್ಣ ಮೆನನ್ ಇದ್ದರು.
Hindu Mahasabha kept far without inviting for the consecration ceremony of Ayodhya Ram Mandir slams Rajesh Pavithran in Mangalore
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm