ಬ್ರೇಕಿಂಗ್ ನ್ಯೂಸ್
25-01-24 05:37 pm Udupi Correspondent ಕರಾವಳಿ
ಉಡುಪಿ, ಜ.25: ಶೆಟ್ಟರ್ ಬಿಜೆಪಿಗೆ ಮರಳುತ್ತಾರೆಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘ ಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮರಳಿರುವುದರಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ, ನಮ್ಮ ವಿಶ್ವಾಸ ಹೆಚ್ಚಾಗಿದೆ. ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದ ಕೋಟ, ಶೆಟ್ಟರ್ ಅವರು ಸುಧೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರ ಮರು ಆಗಮನದಿಂದ ಖುಷಿ, ಸಮಾಧಾನ, ಸಂತೋಷವಾಗಿದೆ ಎಂದರು. ಶೆಟ್ಟರ್ ಬಿಜೆಪಿಯ ಪರಮೋಚ್ಚ ಮುಖಂಡರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಪಕ್ಷಕ್ಕೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ. ಯಾರಿಗೂ ಒಬ್ಬರಿಗೆ ಅಲ್ಲ ಎಂದರು.
ಕಾಂಗ್ರೆಸ್ ಎಷ್ಟೇ ಅವಕಾಶ ಕೊಟ್ಟರೂ ಶೆಟ್ಟರ್ ರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಅಧಿಕಾರಕ್ಕಿಂತ ಹೆಚ್ಚಾಗಿ ಸಮಾಧಾನ ಬೇಕು ಎಂದು ಬಿಜೆಪಿಗೆ ಮರಳಿದ್ದಾರೆ. ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕ್ಕೆ ಬದ್ಧತೆ ಇದೆ ಎಂಬುದಕ್ಕೆ ಶೆಟರ್ ಸಾಕ್ಷಿ. ಲಕ್ಷ್ಮಣ ಸವದಿಯೂ ಮರು ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿದೆ. ಸವದಿ ಕೂಡ ಶೆಟ್ಟರ್ ಹಾದಿ ತುಳಿಯುತ್ತಾರೆ ಎಂಬ ವಿಶ್ವಾಸವಿದೆ. ಮೋದಿ ನಾಯಕತ್ವವನ್ನು ರಾಷ್ಟ್ರವೇ ಪ್ರೀತಿಸುತ್ತಿದೆ. ರಾಮ ಪ್ರತಿಷ್ಠಾಪನೆ ನಂತರ ಕಾಂಗ್ರೆಸ್ ನಲ್ಲಿರುವ ಹಿಂದುಗಳು ಕೂಡ ಬಿಜೆಪಿಯ ವೈಚಾರಿಕತೆಯನ್ನು ಮೆಚ್ಚಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಮೋದಿಯವರನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
Shettar was expected to return to the BJP. He was associated with our ideology for a long time. Leader of Opposition in the Legislative Council Kota Srinivas Poojary said that no other party is suitable for people with ideological backgrounds like Shettar.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm