ಬ್ರೇಕಿಂಗ್ ನ್ಯೂಸ್
01-02-24 05:45 pm Mangalore Correspondent ಕರಾವಳಿ
ಮಂಗಳೂರು, ಫೆ.1: ಮಂಗಳೂರು ವಿಶ್ವವಿದ್ಯಾನಿಲಯದ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ 25ಕ್ಕೂ ಹೆಚ್ಚು ಸಹಕಾರಿ ಸಂಘಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿದ್ದು ಮೇಲ್ನೋಟಕ್ಕೆ ಅಕ್ರಮ ಎಸಗಿರುವ ಶಂಕೆ ಕಂಡುಬರುತ್ತಿದೆ. ವಿವಿಯಲ್ಲಿ ನಿಶ್ಚಿತ ನೀತಿ, ನಿಯಮ ಇಲ್ಲದಿದ್ದರೂ ಬೇಕಾಬಿಟ್ಟಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಆಸಕ್ತಿ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಇವೆಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ನೀಡಿರುವ ಅವರು, ಕೋಲಾರ – ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಒಕ್ಕೂಟ (ಕೊಚಿಮಲ್) ತನ್ನ ವ್ಯಾಪ್ತಿಯ ಉದ್ಯೋಗಿಗಳ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಅರ್ಹತಾ ಲಿಖಿತ ಪರೀಕ್ಷೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಕೋಟಿ ರೂಪಾಯಿಗಳ ಹಗರಣ ನಡೆದಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕಾರ್ಯವನ್ನು ನಿರ್ವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕಚೇರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದು ಈಗಾಗಲೇ ಹಲವಾರು ಗೊಂದಲಗಳಿಂದ ಸುದ್ದಿಯಲ್ಲಿರುವ ವಿವಿಯ ಘನತೆಗೆ ಮತ್ತಷ್ಟು ಕುಂದುಂಟಾಗಿರುವ ಸಂಗತಿಯಾಗಿದೆ. ಸಹಕಾರಿ ಕಾಯ್ದೆಯ ಆವಕಾಶದಂತೆ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿರ್ವಹಿಸಲು ನೇಮಕಾತಿ ನಡೆಸುವ ಸಂಸ್ಥೆಗಳು ವಿಶ್ವವಿದ್ಯಾನಿಲಯದಂತಹ ಸಂಸ್ಥೆಗಳಿಗೆ ನೀಡಬಹುದಾಗಿದೆ. ಆದರೆ ಯಾವುದೇ ವಿಶ್ವವಿದ್ಯಾನಿಲಯಗಳು ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ತನ್ನಲ್ಲಿ ಅದಕ್ಕೆ ಬೇಕಾದ ಒಳನಿಯಮಗಳನ್ನು ರಚಿಸಿಕೊಂಡು ಅದನ್ನು ಅದಕ್ಕೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರ ಯಾ ಸಿಂಡಿಕೇಟ್ ಅನುಮತಿಯನ್ನು ಪಡೆದು ನಡೆಸಬೇಕಾಗುತ್ತದೆ. ಅದರೆ ಮಂಗಳೂರು ವಿವಿಯು ತನ್ನ ಹೊರಗಿನ ಸಂಸ್ಥೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಸೂಕ್ತ ನಿಯಮಾವಳಿಗಳನ್ನು ರಚಿಸಿಕೊಂಡಿದೆಯೇ? ಇಲ್ಲವೆಂದಾದಲ್ಲಿ ಯಾವ ಅಧಿಕಾರವನ್ನು ಬಳಸಿಕೊಂಡು ಖಾಸಗಿಯಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ.ಎಸ್.ಆರ್ ಹರೀಶ್ ಆಚಾರ್ಯ ಪ್ರಶ್ನಿಸಿದ್ದಾರೆ.
ವಿಶ್ವವಿದ್ಯಾನಿಲಯಗಳು ಯಾವುದೇ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ತನ್ನಲ್ಲಿ ಒಳನಿಯಮಗಳನ್ನು ರಚಿಸಿಕೊಂಡು ಸಕ್ಷಮ ವಿಭಾಗಗಳಿಂದ ಅಂಗೀಕಾರ ಪಡೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಶುಲ್ಕವನ್ನು ನಿರ್ಧರಿಸಬೇಕಾಗುತ್ತದೆ. ಪರೀಕ್ಷಾ ಮಂಡಳಿಗಳನ್ನು ರಚಿಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಬೇಕಾಗುತ್ತದೆ. ಆದರೆ ಇದು ಯಾವುದನ್ನೂ ಮಾಡದೆ ಕಳೆದ ಮೂರು – ನಾಲ್ಕು ವರ್ಷಗಳಲ್ಲಿ ಸುಮಾರು ಇಪ್ಪತ್ತೈದಕ್ಕಿಂತ ಹೆಚ್ಚು ಸಹಕಾರ ಸಂಘಗಳಿಗೆ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿರುವುದು ಕಂಡುಬರುತ್ತದೆ. ಇದರಲ್ಲಿ ಹೆಚ್ಚಿನ ಸಂಸ್ಥೆಗಳು ಮಂಗಳೂರು ವಿವಿ ವ್ಯಾಪ್ತಿಯ ಹೊರಗಿನ ಜಿಲ್ಲೆಗಳ ಸಂಸ್ಥೆಗಳಾಗಿದ್ದು ಈ ಲಿಖಿತ ಪರೀಕ್ಷೆಗಳನ್ನು ಕೂಡ ಜಿಲ್ಲೆಯ ಹೊರಗಿನ ಖಾಸಗಿ ಪದವಿ ಪೂರ್ವ ಕಾಲೇಜು ಒಂದರಲ್ಲಿ ಹೆಚ್ಚಾಗಿ ನಡೆಸಿರುವುದು ಕಂಡುಬಂದಿರುತ್ತದೆ. ಹೀಗಾಗಿ ವಿಶ್ವವಿದ್ಯಾನಿಲಯವು ತಾವು ತಾವಾಗಿಯೇ ನಡೆಸಿರುವ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಅನಧಿಕೃತವೇ ಆಗಿದೆ. ಆದುದರಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗವು ಕಳೆದ ಕೆಲವು ವರ್ಷಗಳಿಂದ ಪದವಿ ಕಾಲೇಜುಗಳ ಪರೀಕ್ಷೆಗಳನ್ನು ಸರಿಯಾಗಿ ನಡೆಸದೆ, ಅದರ ಫಲಿತಾಂಶವನ್ನು ಸರಿಯಾಗಿ ನೀಡದೆ, ಫಲಿತಾಂಶ ಬಂದರೂ ಅಂಕಪಟ್ಟಿಯನ್ನು ಸಕಾಲದಲ್ಲಿ ವಿತರಿಸಲು ಸರಿಯಾದ ಕ್ರಮ ಕೈಗೊಳ್ಳದೇ, ಪರೀಕ್ಷಾ ವ್ಯವಸ್ಥೆಯ ಬಗ್ಗೆ ಸಂಪೂರ್ಣವಾಗಿ ನಿರ್ಲಕ್ಷ್ಯ ಧೋರಣೆ ತಾಳಿದೆ. ಇದರಿಂದ ಫಲಿತಾಂಶ ಬಂದರೂ ಸರಿಯಾದ ಸಮಯಕ್ಕೆ ಅಂಕಪಟ್ಟಿ ದೊರೆಯದೆ ಉನ್ನತ ಶಿಕ್ಷಣದ ಅವಕಾಶವನ್ನು ಕಳೆದುಕೊಂಡ ನೂರಾರು ವಿದ್ಯಾರ್ಥಿಗಳು ಇದ್ದಾರೆ. ಪದವಿ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶ ವಂಚಿತರು ಇನ್ನೂ ಸಾಲುಗಟ್ಟಿ ನಿಂತಿದ್ದಾರೆ. ಉದ್ಯೋಗ ನೇಮಕಾತಿಯ ಅಡಚಣೆಯನ್ನು ಎದುರಿಸುತ್ತಿದ್ದಾರೆ. ಆದರೆ ವಿಶ್ವವಿದ್ಯಾನಿಲಯವು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ವಹಿಸದೆ, ತಮ್ಮ ಅಗತ್ಯ ಕಾರ್ಯಗಳನ್ನು ಮರೆತು ಹೊರಗಿನ ಸಂಸ್ಥೆಗಳ ಉದ್ಯೋಗಿಗಳ ನೇಮಕಾತಿ ಪ್ರಕ್ರಿಯೆಗೆ ಸಹಕರಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ಅವರು ದೂರಿದ್ದಾರೆ.
Mangalore University has conducted competitive examinations for more than 25 co-operative societies in the last four years. Though the university does not have a definite policy and rules, it is suspected that it is interested in conducting competitive examinations. Former syndicate member Dr SR Harish Acharya demanded a thorough probe into all these competitive exams.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm