ಬ್ರೇಕಿಂಗ್ ನ್ಯೂಸ್
06-02-24 05:56 pm Mangalore Correspondent ಕರಾವಳಿ
ಮಂಗಳೂರು, ಫೆ.6: ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಧಿಯಲ್ಲಿ ನಯಾ ಪೈಸೆ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಘೋರ ಅನ್ಯಾಯ ಆಗ್ತಿದ್ದು ಅದರ ವಿರುದ್ಧ ಹೋರಾಟ ಎತ್ತಿಕೊಂಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ನಾವು ಎಚ್ಚರಿಕೆ ಕೊಡ್ತಾ ಇದೀವಿ, ಈ ಘೋರ ಅನ್ಯಾಯ ನಿಲ್ಲಿಸಿ. ರಾಜ್ಯಕ್ಕೆ ಅನ್ಯಾಯ ಮಾಡಿದ್ರೆ ಎಲ್ಲಾ ಅನಾಹುತಕ್ಕೆ ಕೇಂದ್ರ ಸರ್ಕಾರವೇ ಹೊಣೆಯಾಗಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಾವು ಯಾರಿಗೂ ಅನ್ಯಾಯ ಮಾಡಿಲ್ಲ, ಉತ್ತರ ಕರ್ನಾಟಕದಲ್ಲಿಯೂ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಆಗ್ತಿದೆ. ಆದರೆ ನಮ್ಮ ಹೋರಾಟ ಅನ್ಯಾಯ ಮಾಡ್ತಿರೋ ಕೇಂದ್ರದ ವಿರುದ್ಧ. ಅನುದಾನದಲ್ಲಿ ತಾರತಮ್ಯ ಮಾಡಿದ್ದಕ್ಕಾಗಿ ಧ್ವನಿ ಎತ್ತಿದ್ದೇವೆ ಎಂದರು.
ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅರ್ಹ, ಯೋಗ್ಯ ಅಭ್ಯರ್ಥಿಗಳಿದ್ದಾರೆ. ಚುನಾವಣೆ ಸ್ಪರ್ಧಿಸಲು ಅಭ್ಯರ್ಥಿ ಬಗ್ಗೆ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸಲು ಉಸ್ತುವಾರಿ ಸಚಿವನಾಗಿ ಶ್ರಮಿಸುತ್ತೇನೆ. ಅಲ್ಲಿ ನನ್ನ ಹೆಸರು ಬೇಡ, ನಾನು ಸದ್ಯ ಅರಣ್ಯ ಇಲಾಖೆ ಸಚಿವನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದವರು ಸಚಿವರಾಗಿ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
ಸವದಿ ಕಾಂಗ್ರೆಸ್ ಬಿಡುತ್ತಾರೆಯೇ ಎಂಬ ಪ್ರಶ್ನೆಗೆ, ಈಗ ಶೆಟ್ಟರ್ ಹೋಗಿದ್ದಾರೆ. ಲಕ್ಷ್ಮಣ್ ಸವದಿ ಸೇರಿದಂತೆ ಮತ್ತೆ ಯಾರೂ ಪಕ್ಷ ಬಿಟ್ಟು ಹೋಗಲ್ಲ. ಎಲ್ಲರೂ ಕಾಂಗ್ರೆಸ್ ನಲ್ಲೇ ಇರುತ್ತಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಖಂಡ್ರೆ ಹೇಳಿದರು.
ಎಲ್ಲ ಚಾರಣಕ್ಕೂ ಆನ್ಲೈನ್ ಬುಕ್ಕಿಂಗ್ !
ಕುಮಾರಪರ್ವತ ಚಾರಣಪಥದಲ್ಲಿ ಜನಜಂಗುಳಿಯಿಂದಾಗಿ ಪರಿಸರಕ್ಕೆ ಹಾನಿಯಾಗುವ ವಿಚಾರದಲ್ಲೂ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿಗೂ ಕ್ರಮ ಕೈಗೊಂಡಿದ್ದೇವೆ. ರಾಜ್ಯದ ಎಲ್ಲಾ ಚಾರಣ ಪಥಗಳನ್ನ ಆನ್ ಲೈನ್ ದಾಖಲಾತಿ ವ್ಯಾಪ್ತಿಗೆ ತರ್ತೇವೆ. ಏಕಾಏಕಿ ಸಾವಿರಾರು ಜನ ಹೋದ್ರೆ ಇಕ್ಕಟ್ಟಾಗಿ ಸಮಸ್ಯೆ ಆಗುತ್ತೆ. ಕುಮಾರ ಪರ್ವತದಲ್ಲಿ ಸುಮಾರು 20 ಕಿ.ಮೀ ಇರಬಹುದು. ಇಂಥ ಜಾಗದಲ್ಲಿ ಎಷ್ಟು ಜನ ಹೋಗಬಹುದು ಅಂತ ನೋಡಿ ಆನ್ ಲೈನ್ ಮೂಲಕ ನಿಗದಿ ಮಾಡ್ತೀವಿ. ಮಿತಿ ಹಾಕಿ ಚಾರಣಿಗರಿಗೆ ನಾವು ಪಾಸ್ ಗಳನ್ನು ಕೊಡ್ತೇವೆ. ಅದನ್ನ ಮೀರಿ ಯಾರಿಗೂ ಬರಲು ಅವಕಾಶ ಇಲ್ಲ. ಚಾರಣ ನಿಯಂತ್ರಣವನ್ನ ಮಾಡಲೇ ಬೇಕಿದೆ, ಅದರ ಅಗತ್ಯ ಇದೆ ಎಂದು ಆ ಕುರಿತ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಕರಾವಳಿ ನಿಯಂತ್ರಣ ವಲಯದಲ್ಲಿ ಹಲವೆಡೆ ಕಟ್ಟಡಗಳ ನಿರ್ಮಾಣ ಆಗಿದೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಈ ಭಾಗದಲ್ಲಿ ಮೂರು ಎಕರೆಗಿಂತ ಕಡಿಮೆ ಬೇಸಾಯ ಮಾಡುವ ರೈತರಿದ್ದಾರೆ. ಅವರಿಗೆ ತೊಂದರೆ ಆಗದ ರೀತಿಯಲ್ಲಿ ಅರಣ್ಯ ಒತ್ತುವರಿ ತೆರವಿಗೆ ಸೂಚಿಸಿದ್ದೇನೆ. ಜೊತೆಗೆ ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಆಗಬೇಕಿದೆ. ಅಂಥ ಕಡೆ ಸರ್ವೇ ನಡೆಸಿ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಖಂಡ್ರೆ ಹೇಳಿದರು.
ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರದ ಮೇಲೆ ಅಪಾರ ಹಾನಿಯಾಗ್ತಿದೆ. ಕರಾವಳಿ ಪ್ರದೇಶಗಳನ್ನ ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ಗುರಿ ಇದೆ. ಸಿಆರ್ ಝಡ್ ವಲಯದ ಅಕ್ರಮದ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಅಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿ ಕೇಳಿದ್ದೇನೆ. ಅಕ್ರಮ ರೆಸಾರ್ಟ್ ಗಳಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಅಕ್ರಮ ಹೋಮ್ ಸ್ಟೇ ಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇವೆ.
ಕಾಡ್ಗಿಚ್ಚು ನಿಯಂತ್ರಣಕ್ಕೆ ಖಾಸಗಿ ಹೆಲಿಕಾಪ್ಟರ್ ಅವಶ್ಯಕತೆ ಇದ್ದರೆ ಬಳಕೆ ಮಾಡುತ್ತೇವೆ. ನಮ್ಮ ಇಲಾಖೆಗೆ ಪ್ರತ್ಯೇಕ ಹೆಲಿಕಾಪ್ಟರ್ ಅವಶ್ಯಕತೆ ಇಲ್ಲ ಎಂದು ಹೇಳಿದ ಅವರು, ಬೆಳ್ತಂಗಡಿ ಕಳೆಂಜ ಅರಣ್ಯ ಭೂಮಿ ವಿವಾದದಲ್ಲಿ ಸರ್ವೇ ಆಗ್ತಿದೆ. ಆಮೇಲೆ ಈ ಬಗ್ಗೆ ಪ್ರತಿಕ್ರಿಯೆ ನೀಡ್ತೇನೆ ಎಂದರು.
Forest Minister Ishwar Khandre has said that online registration will be made mandatory for trekkers to trek at Kumara Parvat, a trekking paradise in the state.Addressing a press conference in Mangaluru on Tuesday, Hegde said that there is a threat of environmental damage due to the crowding on the Kumaraparvatha trekking route.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm