ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.



ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am