ಬ್ರೇಕಿಂಗ್ ನ್ಯೂಸ್
23-11-20 04:29 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪದವಿ ಕಾಲೇಜು ಆರಂಭಗೊಂಡು ವಾರ ಕಳೆಯುತ್ತಿದ್ದು, ಕಾಲೇಜು ತೆರಳುವ ಮುನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾಡಳಿತದಿಂದ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದ್ದು, ಈವರೆಗೆ ಟೆಸ್ಟ್ ಆಗಿ ರಿಪೋರ್ಟ್ ಬಂದಿದ್ದರಲ್ಲಿ 29 ವಿದ್ಯಾರ್ಥಿಗಳು ಮಾತ್ರ ಕೊರೊನಾ ಪಾಸಿಟಿವ್ ಆಗಿದ್ದಾರೆ.
ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಬಂದಿದ್ದ ಆರು ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗುತ್ತಿದೆ. ಶನಿವಾರ ರಾತ್ರಿ ವರೆಗೆ 16,441 ವಿದ್ಯಾರ್ಥಿಗಳ ಕೋವಿಡ್ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 17 ಸಾವಿರ ವಿದ್ಯಾರ್ಥಿಗಳ ಪೈಕಿ ಕೇವಲ 29 ಮಂದಿಗೆ ಮಾತ್ರ ಕೋವಿಡ್ ಕಂಡುಬಂದಿದ್ದು ಅತ್ಯಂತ ಸಂತಸದ ಬೆಳವಣಿಗೆಯಾಗಿದೆ. ಕೊರೊನಾ ನಮ್ಮನ್ನು ಬಿಟ್ಟು ದೂರ ಹೋಗುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.
As colleges have reopened in Mangalore the over all attendance on the first day was 17 thousand in which only 29 students have been tested covid positive.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am