ಬ್ರೇಕಿಂಗ್ ನ್ಯೂಸ್
09-02-24 01:23 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕಾಂಗ್ರೆಸ್ ಸರ್ಕಾರದ ವಿರುದ್ಧವೂ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಆರೋಪ ಮಾಡಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು ನಮ್ಮ ಸರ್ಕಾರ ಬದ್ದತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡ್ತಿದೆ. ಕೆಂಪಣ್ಣರ ವಿಷಯ ನಿಜವಾಗಿದ್ರೆ ಬಂದು ಸಿಎಂಗೆ ಹೇಳಬಹುದು. ಅವರು ಯಾವ ವಿಚಾರ ಎಲ್ಲಿ, ಏನಾಗ್ತಿದೆ ಅಂತ ಸ್ಪಷ್ಟವಾಗಿ ಹೇಳಲಿ. ನನ್ನ ಇಲಾಖೆಯಲ್ಲಿ ಆಗ್ತಿದ್ರೆ ನಾನು ತನಿಖೆ ಮಾಡಿಸ್ತೇನೆ ಎಂದು ಹೇಳಿದ್ದಾರೆ.
ಕಳೆದ ಬಾರಿ ಅವರು ಅನೇಕ ವಿಷಯಗಳನ್ನು ಪ್ರಸ್ತಾಪ ಮಾಡಿದ್ದರು. ಅದರಿಂದ ನಾವು ಅವರ ಆರೋಪಕ್ಕೆ ತನಿಖೆ ಮಾಡಿಸ್ತಾ ಇದೀವಿ. ಅದೇ ರೀತಿ ಇವತ್ತು ಇದ್ದರೂ ಕ್ರಮ ತೆಗೊಳ್ಳೋಣ. ಭ್ರಷ್ಟಾಚಾರಕ್ಕೆ ಯಾವುದೇ ಸಹನೆ ಇರಬಾರದು. ಯಾರದ್ರೂ ನಮ್ಮಲ್ಲಿ ಪರ್ಸೆಂಟ್ ಕೇಳುವ ದಾಖಲೆ ಇದ್ರೆ ತನಿಖೆ ಮಾಡಿಸೋಣ ಎಂದು ಸಚಿವ ಗುಂಡೂರಾವ್ ಹೇಳಿದ್ದಾರೆ.

ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬ ಶಾಸಕ ಹರೀಶ್ ಪೂಂಜಾ ಅವರ ವಿವಾದಿತ
ಪೋಸ್ಟ್ ಬಗ್ಗೆ ಕೇಳಿದ ಪ್ರಶ್ನೆಗೆ, ಹರೀಶ್ ಪೂಂಜಾ ತೆರಿಗೆ ವಿಭಜಿಸುವ ಹೇಳಿಕೆ ನೀಡಿದ್ದು ತಪ್ಪು. ಅವರ ಪೋಸ್ಟ್ ಉದ್ದೇಶ ರಾಜ್ಯಕ್ಕೆ ಅನ್ಯಾಯ ಆಗ್ತಿದೆ ಎನ್ನೋದು ಇಲ್ಲ. ನಮ್ಮ ವಾದದಲ್ಲಿ ಸತ್ಯಾಂಶ ಇದ್ರೆ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳದೇ ಮೊಂಡುವಾದ ಪ್ರದರ್ಶನ ಮಾಡಬಾರದು. ಯುಪಿಎ ಅವಧಿಯಲ್ಲಿ ಎಷ್ಟು ಹಣ ಬಂದಿದೆ, ಕಳೆದ ಹತ್ತು ವರ್ಷದಲ್ಲಿ ಎಷ್ಟು ಹಣ ಬಂದಿದೆ ಎಂದು ನೋಡಲಿ. ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಏನೂ ವೃದ್ಧಿಯಾಗಿಲ್ಲ. ಕೇಂದ್ರದಿಂದ ಯಾವುದೇ ಲಾಭ ರಾಜ್ಯಕ್ಕೆ ಬರುತ್ತಿಲ್ಲ. ಕೇಂದ್ರಕ್ಕೆ ಹೆಚ್ಚು ಹಣ ಕೊಡುತ್ತಿದ್ದೇವೆ, ಆದರೆ ಬರೋದು ಕಡಿಮೆಯಾಗುತ್ತಿದೆ.
ಹತ್ತು ವರ್ಷದಿಂದ ಅದೇ ಪ್ರಮಾಣದಲ್ಲಿ ಹಣ ಬರುತ್ತಿದೆ. ಇದರ ಬಗ್ಗೆ ಬಿಜೆಪಿ ಶಾಸಕರು ಯಾರೂ ಮಾತನಾಡುತ್ತಿಲ್ಲ. ಇದು ನಮ್ಮ ದುರ್ದೈವದ ಸಂಗತಿ. ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸವನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ಬಂಧನ, ವಿರೋಧ ಪಕ್ಷದ ನಾಯಕರ ಬಂಧನವಾಗುತ್ತಿದೆ. ತನಿಖಾ ಸಂಸ್ಥೆಗಳು ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ. ಚಂಡೀಗಢ ಮೇಯರ್ ಚುನಾವಣೆ ಈ ಘಟನೆಗಳಿಗೆ ಸಾಕ್ಷಿ. ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಕುಸಿಯುತ್ತಿದೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Kempanna Contractors Allege Corruption by Karnataka Govt Officials, Dinesh Gundu Rao reacts in Mangalore says if he has proof come to CM. High drama prevailed on Saturday night as five office-bearers of the Karnataka State Contractor’s Association, including its president D. Kempanna, who has been at the forefront of the fight against the alleged “40% commission” in contracts awarded by the State government, were arrested by the Vyalikaval police. They were granted bail around midnight.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm