ಬ್ರೇಕಿಂಗ್ ನ್ಯೂಸ್
25-11-20 02:41 pm Mangalore Correspondent ಕರಾವಳಿ
ಮಂಗಳೂರು, ನ.25: ಅತ್ತ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸಬೇಕಾದ್ರೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳವಾರ ಸದ್ದಿಲ್ಲದೆ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕೆಲವು ನಾಯಕರೊಂದಿಗೆ ಚರ್ಚಿಸಿ ಹೋಗಿದ್ದಾರೆ.
ಪಕ್ಷದ ನೆಲೆಯಲ್ಲಿ ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗುತ್ತಿದೆ. ಸಂತೋಷ್ ಅವರು ಉಡುಪಿಗೆ ಆಗಮಿಸಿದ್ದು, ಅಲ್ಲಿಂದ ಬೆಂಗಳೂರಿಗೆ ಮರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಮಂಗಳೂರು ಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.
ಆದರೆ ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗ ಬಹುದಾದ ಗ್ರಾ.ಪಂ. ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪ್ರಸಕ್ತ ವಿದ್ಯಮಾನಗಳ ಹಿನ್ನಲೆಯಲ್ಲಿ ಸಂತೋಷ್ ಅವರ ಮಂಗಳೂರು ಭೇಟಿ ರಾಜಕೀಯ ಕುತೂಹಲಗಳಿಗೆ ಕಾರಣವಾಗಿದೆ.
ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಶಾಸಕ ವೇದವ್ಯಾಸ ಕಾಮತ್, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ದಿವಾಕರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಾಧ್ಯಮ ವಕ್ತಾರ ಜಗದೀಶ ಶೇಣವ ಅವರು ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಕೂಡ ಕಚೇರಿಗೆ ಆಗಮಿಸಿ ಸಂತೋಷ್ ಅವರನ್ನು ಭೇಟಿ ಮಾಡಿದರು.
Bjp National General Secretary B L Santosh has made a surprise visit to Mangalore and has held a meeting with the leaders of Dakshina Kannada.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am