ಬ್ರೇಕಿಂಗ್ ನ್ಯೂಸ್
28-02-24 09:06 am Mangaluru Correspondent ಕರಾವಳಿ
ಮಂಗಳೂರು, ಫೆ.28: ಸುರತ್ಕಲ್ ವಿದ್ಯಾದಾಯಿನಿ ಶಾಲೆಯಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ಸಮೀಪದ ನಂದಿನಿ ನದಿಯಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ(15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್(15) ಸಾವನ್ನಪ್ಪಿದವರು.


ನಿನ್ನೆ ಮಧ್ಯಾಹ್ನ ಪ್ರಿಪರೇಟರಿ ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ತೆರಳದೇ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಮಕ್ಕಳಿಗಾಗಿ ಪೋಷಕರು ಹುಡುಕಾಟ ನಡೆಸಿದ್ದು ಸಂಜೆಯ ವೇಳೆಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಹುಡುಕಾಟ ನಡೆಸುತ್ತಿದ್ದಾಗ ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್, ಸಮವಸ್ತ್ರ ಪತ್ತೆಯಾಗಿದೆ. ಸಂಶಯದಿಂದ ನಂದಿನಿ ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ.
ಹಳೆಯಂಗಡಿ ನದಿಯಲ್ಲಿ ಅಣೆಕಟ್ಟು ಕಟ್ಟಲಾಗಿದ್ದು ಅದೇ ಪ್ರದೇಶದಲ್ಲಿ ನಾಲ್ವರ ಶವ ಪತ್ತೆಯಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಈಜಾಡಲು ಬಂದಿರುವ ಶಂಕೆಯಿದೆ. ನೀರಿನ ಆಳ ತಿಳಿಯದೆ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore surathkal Four missing students body found near Haleyangadi dam railway bridg. In a heart-breaking turn of events, the bodies of four missing students were discovered at the Haleyangadi Koppala dam railway bridge.The students, identified as Yashwith (15) and Niroopa (15) from Surathkal, Raghavendra (15) from Thokur, and Anvith (15), were all students of Vidyadayini School, studying for their SSLC exams.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am