ಬ್ರೇಕಿಂಗ್ ನ್ಯೂಸ್
03-03-24 01:46 pm Mangalore Correspondent ಕರಾವಳಿ
ಮಂಗಳೂರು, ಮಾ.3 ಕಾಂಗ್ರೆಸ್ ಸರ್ಕಾರ ಭಯೋತ್ಪಾದನೆ ಬಗ್ಗೆ ಮೃದು ಧೋರಣೆ ತೋರುತ್ತಿರುವುದರಿಂದ ಆಂತರಿಕ ಭದ್ರತೆ ಸಡಿಲವಾಗುತ್ತಿದೆ. ಇದರ ಪರಿಣಾಮವಾಗಿ ಬಾಂಬ್ ಸ್ಫೋಟದಂತಹ ಘಟನೆಗಳಾಗುತ್ತಿವೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದನ್ನೂ ಸಮರ್ಥನೆ ಮಾಡುತ್ತಿರುವುದರಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಧ್ವಂಸಕ ಶಕ್ತಿ, ಗೂಂಡಾಶಕ್ತಿಗಳು ತಲೆ ಎತ್ತುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಟೀಕಿಸಿದ್ದಾರೆ.
ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಇಡೀ ದೇಶ ಭದ್ರತೆ ವಿಚಾರದಲ್ಲಿ ಗಟ್ಟಿಗೊಳ್ಳುತ್ತಿರುವ ಹೊತ್ತಲ್ಲಿ ಕರ್ನಾಟಕದಲ್ಲಿ ಮಾತ್ರ ಬಾಂಬ್ ಸ್ಫೋಟದಂತಹ ವಿಧ್ವಂಸಕ ಕೃತ್ಯ ಆಗುತ್ತಿರುವುದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಭದ್ರತೆ ಸಡಿಲಗೊಳ್ಳುತ್ತಿರುವುದಕ್ಕೆ ಸಾಕ್ಷಿ. ಬೆಂಗಳೂರು ಮಹಾನಗರದಲ್ಲಿ ಹತ್ತು ವರ್ಷಗಳ ಬಳಿಕ ಬಾಂಬ್ ಸ್ಫೋಟ ಆಗಿರುವುದು, ಇದರ ಹಿಂದೆ ನಿಷೇಧಿತ ಐಸಿಸ್ ಸಂಘಟನೆ ಕೈವಾಡದ ಶಂಕೆ ವ್ಯಕ್ತವಾಗಿದೆ. ಆಮೂಲಕ ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ದೇಶ ವಿರೋಧಿ ಶಕ್ತಿಗಳು ಗಟ್ಟಿಯಾಗಿರುವುದನ್ನು ಸೂಚಿಸಿದೆ. ಇದನ್ನು ಜನತೆ ಗಮನಿಸುತ್ತಿದ್ದು ಅಧಿಕಾರವನ್ನು ಯಾರ ಕೈಯಲ್ಲಿ ನೀಡಿದರೆ ಉತ್ತಮ ಎಂಬ ಬಗ್ಗೆ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ನಾಯಕರು ಪಾಕಿಸ್ತಾನವನ್ನು ನೆರೆ ರಾಷ್ಟ್ರ ಅಂತ ಹೇಳುತ್ತಿದ್ದಾರೆ. ದೇಶದ ಸಂಸತ್ತಿಗೆ ದಾಳಿ ಮಾಡಿದವರು, ಪುಲ್ವಾಮಾ ದಾಳಿಯ ಮೂಲಕ ನಮ್ಮ ಯೋಧರನ್ನು ಕೊಂದವರು ನೆರೆ ರಾಷ್ಟ್ರದವರೇ. ನಾವು ಅವರನ್ನು ನೆರೆ ರಾಷ್ಟ್ರ ಎಂದು ಒಪ್ಪಿಕೊಳ್ಳಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್ ನೆಲೆ ಕಳಕೊಂಡಿದೆ. ದೇಶ ವಿರೋಧಿ ಕೃತ್ಯಗಳಿಗೆ ಆಸ್ಪದ ನೀಡುತ್ತಿರುವುದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ತೊಲಗಿಸಿ ಎಂದು ಕರೆ ಕೊಡಲು ರಾಜ್ಯ ಬಿಜೆಪಿ ಮುಂದಾಗಿದೆ. ಕರ್ನಾಟಕದಲ್ಲಿ ಜನರು ಕಾಂಗ್ರೆಸಿಗೆ ಇದೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ.
ಬಿಜೆಪಿ ಕೇಂದ್ರೀಯ ಮಂಡಳಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪೈಕಿ 57 ಮಂದಿ ಹಿಂದುಳಿದ ವರ್ಗಕ್ಕೆ ಅವಕಾಶ ಕೊಟ್ಟಿದ್ದಾರೆ, ಇದು ಬಿಜೆಪಿ ಹಿಂದುಳಿದ ವರ್ಗಗಳ ಬಗ್ಗೆ ಬದ್ಧತೆ ಹೊಂದಿರುವುದನ್ನು ತೋರಿಸುತ್ತದೆ ಎಂದು ಹೇಳಿದ ಅವರು, ಮಂಗಳೂರು ಅವಿಭಜಿತ ದ.ಕ. ಜಿಲ್ಲೆ ಸಂಘಟನಾತ್ಮಕವಾಗಿ ಪ್ರಬಲ ಕ್ಷೇತ್ರ. ಈ ಭಾಗದಲ್ಲಿ ಪಕ್ಷ ಅತಿ ಹೆಚ್ಚು ಅಂತರದಿಂದ ಗೆಲ್ಲುವ ಮೂಲಕ ಇಡೀ ರಾಜ್ಯಕ್ಕೆ ಸಂದೇಶ ನೀಡಲಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ನಾರಾಯಣ ರೆಂಜ, ವಿಠಲ್ ಪೂಜಾರಿ, ಕಿಶೋರ್ ಪುತ್ತೂರು, ಗಿರೀಶ್ ಕುಮಾರ್ ಇದ್ದರು.
Internal security is being eroded as the Congress government is soft on terrorism. As a result, incidents like bomb blasts are taking place.Internal security is being eroded as the Congress government is soft on terrorism. As a result, incidents like bomb blasts are taking place.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm