ಬ್ರೇಕಿಂಗ್ ನ್ಯೂಸ್
03-03-24 10:49 pm Mangalore Correspondent ಕರಾವಳಿ
ಮಂಗಳೂರು, ಮಾ.3: ಹಾಲಿ ಕೇಂದ್ರ ಸಚಿವೆ, ಎರಡು ಬಾರಿಯ ಸಂಸದೆ ಮೀನಾಕ್ಷಿ ಲೇಖಿ ದೆಹಲಿ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ. ಸೀಟು ಸಿಗದ ಸಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಜಿಲ್ಲಾ ಸಮಾವೇಶದಿಂದ ದೂರವುಳಿದಿದ್ದು, ಕಾರ್ಯಕ್ರಮವನ್ನು ಕೊನೆಕ್ಷಣದಲ್ಲಿ ರದ್ದು ಮಾಡಲಾಗಿದೆ.
ಇತ್ತೀಚೆಗೆ ಮೀನಾಕ್ಷಿ ಲೇಖಿ ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ರದ್ದುಗೊಂಡಿದ್ದರಿಂದ ಮತ್ತೆ ಮೀನಾಕ್ಷಿ ಲೇಖಿ ಕಾರ್ಯಕ್ರಮವನ್ನು ಮಾ.4ರಂದು ಸಂಘ ನಿಕೇತನದಲ್ಲಿಯೇ ಆಯೋಜಿಸಲಾಗಿತ್ತು. ತರಾತುರಿಯಲ್ಲಿ ಶನಿವಾರ ಅಂತಿಮಗೊಳಿಸಿ ಅದಕ್ಕಾಗಿ ಸಿದ್ಧತೆಯನ್ನೂ ಮಾಡಲಾಗಿತ್ತು. ಆದರೆ, ಮೀನಾಕ್ಷಿ ಲೇಖಿ ಬರುವುದಿಲ್ಲ ಎಂಬ ವಿಚಾರ ತಿಳಿದ ಜಿಲ್ಲಾ ಬಿಜೆಪಿ ಕೊನೆಕ್ಷಣದಲ್ಲಿ ಭಾನುವಾರ ಸಂಜೆ ಕಾರ್ಯಕ್ರಮವನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿರುವುದಾಗಿ ಪ್ರಕಟಿಸಿದೆ. ಶನಿವಾರ ಪ್ರಕಟವಾದ 195 ಅಭ್ಯರ್ಥಿಗಳಲ್ಲಿ ದೆಹಲಿಯ ನಾಲ್ವರು ಸಂಸದರಿಗೆ ಕೊಕ್ ನೀಡಲಾಗಿದೆ. ಅದರಲ್ಲಿ ಹಾಲಿ ವಿದೇಶಾಂಗ ಇಲಾಖೆಯ ಸಹಾಯಕ ಸಚಿವೆಯಾಗಿರುವ ಮೀನಾಕ್ಷಿ ಲೇಖಿ ಕೂಡ ಒಬ್ಬರಾಗಿದ್ದಾರೆ.
ಸುಪ್ರೀಂ ಕೋರ್ಟ್ ವಕೀಲರೂ ಆಗಿರುವ ಮೀನಾಕ್ಷಿ ಲೇಖಿ 2014 ಮತ್ತು 2019ರಲ್ಲಿ ದೆಹಲಿ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ. ಈ ಬಾರಿ ವಿರೋಧಿ ಅಲೆ ಎದುರಿಸುತ್ತಿರುವ ಕಾರಣದಿಂದಾಗಿ ಲೇಖಿ ಅವರನ್ನು ಬದಲಿಸಲಾಗಿದ್ದು, ಆ ಸ್ಥಾನವನ್ನು ಮಾಜಿ ವಿದೇಶಾಂಗ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಮಗಳು 39 ವರ್ಷದ ಬಾನ್ಸುರಿ ಸ್ವರಾಜ್ ಅವರಿಗೆ ನೀಡಲಾಗಿದೆ. ಇದರಿಂದ ಸಿಟ್ಟಿನಲ್ಲಿರುವ ಮೀನಾಕ್ಷಿ ಲೇಖಿ ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ.
ಮಂಗಳೂರಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶ ಆಗಿದ್ದರಿಂದ ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗಿತ್ತು. ಉಡುಪಿಯಲ್ಲೂ ಚಿಂತನ ಗಂಗ ಹೆಸರಿನಲ್ಲಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಆರೋಗ್ಯ ಸಚಿವ ಹರ್ಷವರ್ಧನ್ ಸಿಂಗ್ ಅವರಿಗೂ ದೆಹಲಿಯಲ್ಲಿ ಟಿಕೆಟ್ ಮಿಸ್ ಆಗಿದೆ. ಟಿಕೆಟ್ ತಪ್ಪಿದ ಸಂಸದರನ್ನು ದೆಹಲಿಯಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಲು ಕಳಿಸುವ ಸಾಧ್ಯತೆಯಿದೆ.
Union Minister and two-time MP Meenakshi Lekhi has failed to get a BJP ticket from Delhi Central constituency. Angry over not getting a seat, he stayed away from the district convention of booth-level workers organised in Mangaluru and the programme was cancelled at the last minute.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm