ಬ್ರೇಕಿಂಗ್ ನ್ಯೂಸ್
10-03-24 02:52 pm Mangalore Correspondent ಕರಾವಳಿ
ಮಂಗಳೂರು, ಮಾ.10: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗಾಗಿ ವಿಶ್ವ ಹಿಂದು ಪರಿಷತ್ತಿನಿಂದ ರಾಜ್ಯ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳಿಗೆ ಸಾಥ್ ನೀಡಲಿದ್ದೇವೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಆರೋಪಿಯ ಫೋಟೋವನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಬಳ್ಳಾರಿ, ಭಟ್ಕಳಕ್ಕೆ ಹೋಗಿದ್ದಾನೆ, ಅಲ್ಲಿನ ಮಸೀದಿಗಳಿಗೆ ಹೋಗಿದ್ದಾನೆ ಎಂಬುದನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ ಭಟ್ಕಳ ಸೇರಿದಂತೆ ರಾಜ್ಯದೆಲ್ಲೆಡೆ ಮಸೀದಿ, ಮದ್ರಸಾಗಳಿಗೆ ದಾಳಿ ನಡೆಸಬೇಕು. ದಾಳಿ ನಡೆಸಿದರೆ ಆರೋಪಿ ಕುರಿತು ಮಾಹಿತಿ ಸಿಗಬಹುದು. ಅದಕ್ಕಾಗಿ ವಿಶ್ವ ಹಿಂದು ಪರಿಷತ್ತಿನಿಂದ ಪೊಲೀಸರಿಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಶರಣ್ ಪಂಪ್ವೆಲ್ ಹೇಳಿದ್ದಾರೆ.
ಭಟ್ಕಳದಲ್ಲಿ ಭಯೋತ್ಪಾದಕರಿಗೆ ನಂಟು ಇರುವುದು ಬಹಳಷ್ಟು ಬಾರಿ ಸಾಬೀತಾಗಿದೆ. ಮದ್ರಸಾಗಳು ಭಯೋತ್ಪಾದಕರಿಗೆ ಪೂರಕವಾಗುವ ಶಿಕ್ಷಣ ನೀಡುತ್ತಿದ್ದಾರೆಂಬ ಅಂಶವೂ ಹಲವು ಬಾರಿ ಪತ್ತೆಯಾಗಿದೆ. ಈ ಕಾರಣಕ್ಕೆ ಮದ್ರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿವೆ. ನಾವು ಆರೋಪಿ ಪತ್ತೆಗಾಗಿ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಆರೋಪಿ ಫೋಟೋ ಪ್ರಕಟಿಸಿ ಪತ್ತೆಗೆ ಸಹಕಾರ ನೀಡುತ್ತೇವೆ. ಆರೋಪಿ ರಾಜ್ಯದ ಹಲವು ಕಡೆ ಸರಕಾರಿ ಬಸ್ಸುಗಳಲ್ಲಿ ಓಡಾಡಿರುವ ಬಗ್ಗೆ ಸಿಸಿಟಿವಿ ಚಿತ್ರಗಳನ್ನು ಪತ್ತೆ ಮಾಡಿದ್ದಾರೆ. ಇದರಿಂದಾಗಿ ಆರೋಪಿ ರಾಜ್ಯದಲ್ಲೇ ಇರುವ ಸಾಧ್ಯತೆಯಿದೆ. ನಾವು ದೇಶಾದ್ಯಂತ ನಮ್ಮ ನೆಟ್ವರ್ಕ್ ಆಧರಿಸಿ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸುತ್ತೇವೆ ಎಂದವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
Mangalore Vhp Sharan Pumpwell, says officals should raid Mosques and Madrasas to find Bangalore Rameshwaram Cafe blast terrorist and for this we will help NIA and police officlas he added.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm